Saturday, July 19, 2025
spot_imgspot_img
spot_imgspot_img

ವಿಧಾನ ಪರಿಷತ್ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣವಚನ ಸ್ವೀಕಾರ

- Advertisement -
- Advertisement -

ಬೆಂಗಳೂರು: ವಿಧಾನ ಪರಿಷತ್ತಿನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಯ್ಕೆಯಾದ ಕಿಶೋ‌ರ್ ಕುಮಾ‌ರ್ ಪುತ್ತೂರು ಅವರು ಪರಿಷತ್‌ನ ನೂತನ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು.

ವಿಧಾನಸೌಧದ ಸಭಾಪತಿ ಕೊಠಡಿಯಲ್ಲಿ ಇಂದು ನಡೆದ ಸರಳ ಸಮಾರಂಭದಲ್ಲಿ ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ನೂತನ ಸದಸ್ಯರಿಗೆ ಪ್ರಮಾಣವಚನ ಬೋಧಿಸಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಶಾಸಕರಾದ ಹರೀಶ್ ಪೂಂಜ, ಡಾ. ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಮತ್ತು ಮಾಜಿ ಶಾಸಕ ಸಂಜೀವ ಮಠಂದೂರು ಪ್ರಮುಖರು ಉಪಸ್ಥಿತರಿದ್ದು ಶುಭ ಹಾರೈಸಿದರು.

ಪುತ್ತೂರಿನ ಐವತ್ತಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಹಾಜರಿದ್ದರು. ಅಕ್ಟೋಬರ್ 21 ರಂದು ನಡೆದಿದ್ದ ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಿಶೋರ್ ಕುಮಾರ್ ಗೆಲುವು ಸಾಧಿಸಿದ್ದರು.

- Advertisement -

Related news

error: Content is protected !!