Wednesday, June 17, 2026
spot_imgspot_img
spot_imgspot_img

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದ ಕೆ.ಎಲ್​ ರಾಹುಲ್​

- Advertisement -
- Advertisement -

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕ್ರಿಕೆಟಿಗೆ ಕೆ.ಎಲ್.ರಾಹುಲ್ ಅವರು ಆಗಮಿಸಿದ್ದಾರೆ. ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ರಾಹುಲ್‌ ಅವರು ಬಳಿಕ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ವೇಳೆ ಹೆಗ್ಗಡೆ ಕುಟುಂಬದವರು ಜತೆಯಲ್ಲಿದ್ದರು.

ಐಪಿಎಲ್‌ ವೇಳೆ ಗಾಯಗೊಂಡಿದ್ದ ಕೆಎಲ್‌ ರಾಹುಲ್‌ ಬಳಿಕ ಲಂಡನ್‌ ನಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಸದ್ಯ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿಯಲ್ಲಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಮುಂದಿನ ಏಷ್ಯಾಕಪ್‌ ವೇಳೆಗೆ ಅವರು ತಂಡ ಸೇರುವ ನಿರೀಕ್ಷೆಯಿದೆ. ಮಂಗಳೂರು ಮೂಲದ ಕ್ರಿಕೆಟಿಗ ರಾಹುಲ್‌ ಕೆಲವೇ ತಿಂಗಳ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೂ ಭೇಟಿ ನೀಡಿದ್ದರು

- Advertisement -

Related news

error: Content is protected !!