- Advertisement -
- Advertisement -



ಕೊಚ್ಚಿ: ಕೇರಳದ ಕೊಚ್ಚಿಯ ಮುನಂಬಂನಲ್ಲಿ ಯುವಕನೊಬ್ಬ ತಿಂಡಿ ತಿನ್ನುತ್ತಿದ್ದಾಗಲೇ ಅನಿರೀಕ್ಷಿತವಾಗಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ವ್ಯಕ್ತಿ ಕೊಚ್ಚಿ ಮುನಂಬಂ (21) ಎನ್ನಲಾಗಿದೆ.
ಭಾನುವಾರ ಬೆಳಿಗ್ಗೆ ಚರ್ಚ್ ಗೆ ಹೋಗಿ ಬಂದ ನಂತರ ಕುಟುಂಬದವರೊಂದಿಗೆ ಕುಳಿತು ತಿಂಡಿ ತಿನ್ನುತ್ತಿದ್ದರು. ಮೊದಲು ಪಪ್ಸ್ ಮತ್ತು ನಂತರ ಉಪ್ಪಿಟ್ಟು ತಿನ್ನುವಾಗ ಇದ್ದಕ್ಕಿದ್ದಂತೆ ಅಸ್ವಸ್ಥತೆ ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ. ತಕ್ಷಣವೇ ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವೇ ನಿಖರ ಕಾರಣ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
- Advertisement -








