Saturday, May 4, 2024
spot_imgspot_img
spot_imgspot_img

ಬಿಜೆಪಿ ನಾಯಕ ರಂಜಿತ್‌ ಶ್ರೀನಿವಾಸನ್‌ ಹತ್ಯೆ ಪ್ರಕರಣ; 15 ಪಿಎಫ್‌ಐ ಕಾರ್ಯಕರ್ತರಿಗೆ ಮರಣದಂಡನೆ

- Advertisement -G L Acharya panikkar
- Advertisement -

ರಾಷ್ಟ್ರೀಯ ಸ್ವಯಂ ಸೇವಕ (ಆರ್‌ ಎಸ್‌ ಎಸ್)‌ ಸಂಘದ ಕಾರ್ಯಕರ್ತ, ಬಿಜೆಪಿ ನಾಯಕ ರಂಜಿತ್‌ ಶ್ರೀನಿವಾಸನ್‌ ಹತ್ಯೆ ಪ್ರಕರಣದಲ್ಲಿ ದೋಷಿತರಾಗಿದ್ದ ಎಸ್‌ಡಿಪಿಐ ಮತ್ತು ಪಿಎಫ್‌ಐನ 15 ಮಂದಿ ಕಾರ್ಯಕರ್ತರಿಗೆ ಕೇರಳದ ಮಾವೇಲಿಕರ ಅಡಿಷನಲ್ ಸೆಷನ್ಸ್ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿ ಜ. 30 ತೀರ್ಪು ಪ್ರಕಟಿಸಿದೆ.

2012ರ ಡಿಸೆಂಬರ್ 19ರಂದು ರಂಜಿತ್ ಶ್ರೀನಿವಾಸನ್ ಅವರು ವಾಸವಾಗಿದ್ದ ಆಲೆಪ್ಪಿಯ ಮನೆಗೆ ಪ್ರವೇಶಿಸಿದ ಪಿಎಫ್‌ ಐ ಮತ್ತು ಎಸ್‌ ಡಿಪಿಐ ಕಾರ್ಯಕರ್ತರಾಗಿದ್ದ ಅರೋಪಿಗಳು ಕುಟುಂಬ ಸದಸ್ಯರ ಎದುರೇ ಕೊಚ್ಚಿ ಕೊಲೆ ಮಾಡಿದ್ದರು.

ಎಸ್‌ ಡಿಪಿಐ ಮುಖಂಡ ಕೆಎಸ್‌ ಶಾನ್‌ ಡಿಸೆಂಬರ್‌ 18ರ ರಾತ್ರಿ ಆಲಪುಳದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಗುಂಪೊಂದು ದಾಳಿ ನಡೆಸಿ ಕೊಲೆಗೈದಿದ್ದ ಕೆಲವೇ ಗಂಟೆಗಳ ನಂತರ ಆರ್‌ ಎಸ್‌ ಎಸ್‌ ಕಾರ್ಯಕರ್ತ ಶ್ರೀನಿವಾಸನ್‌ ಅವರ ಕೊಲೆ ಘಟನೆ ನಡೆದಿತ್ತು. ಆಲೆಪ್ಪಿ ಜಿಲ್ಲೆಯಲ್ಲಿ ನಡೆದ 3 ಸರಣಿ ರಾಜಕೀಯ ಕೊಲೆಗಳಲ್ಲಿ ಕೊನೆಯದಾಗಿ ರಂಜಿತ್ ಕೊಲೆಯಾಗಿತ್ತು.

ಮಾವೇಲಿಕ್ಕರ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ವಿಜಿ ಶ್ರೀದೇವಿ ಅವರು ಈ ಶಿಕ್ಷೆ ವಿಧಿಸಿದ್ದಾರೆ. ಮೊದಲ ಎಂಟು ಆರೋಪಿಗಳ ವಿರುದ್ಧ ಕೊಲೆಯ ಅಪರಾಧ ಸಾಬೀತಾಗಿದೆ ಮತ್ತು ಇತರ ಆರೋಪಿಗಳು ಕ್ರಿಮಿನಲ್ ಪಿತೂರಿಯಲ್ಲಿ ತಪ್ಪಿತಸ್ಥರೆಂದು ನ್ಯಾಯಾಲಯಕ್ಕೆ ತಿಳಿದುಬಂದಿದೆ. ನಿಜಾಮ್, ಅಜ್ಮಲ್, ಅನೂಪ್, ಎಂಡಿ ಅಸ್ಲಾಂ, ಸಲಾಂ, ಅಬ್ದುಲ್ ಕಲಾಂ, ಸಫರುದ್ದೀನ್, ಮುನ್ಶಾದ್, ಜಜೀಬ್, ನವಾಜ್, ಶೆಮೀರ್, ನಜೀರ್, ಜಾಕೀರ್ ಹುಸೇನ್, ಶಾಜಿ, ಶಮ್ನಾಜ್ ಶಿಕ್ಷೆಗೊಳಗಾದವರು.

- Advertisement -

Related news

error: Content is protected !!