- Advertisement -
- Advertisement -
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಅಲ್ಲಲ್ಲಿ ಗುಡ್ಡ ಕುಸಿತ ಉಂಟಾಗುತ್ತಿದೆ. ಜಿಲ್ಲಾಧಿಕಾರಿಗಳ ಕಚೇರಿಗೂ ಆತಂಕ ಎದುರಾಗಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿಗಳ ಕಚೇರಿಯನ್ನು ಮಡಿಕೇರಿ ನಗರಸಭೆ ಕಾರ್ಯಾಲಯಕ್ಕೆ ತಾತ್ಕಾಲಿಕವಾಗಿ ಶಿಫ್ಟ್ ಮಾಡಲಾಗಿದೆ.
ಮಳೆ ಇಳಿಮುಖವಾಗುವವರೆಗೆ ನಗರಸಭೆ ಕಚೇರಿಯಲ್ಲಿಯೇ ಜಿಲ್ಲಾಧಿಕಾರಿ ಕಾರ್ಯ ನಿರ್ವಹಿಸಲಿದ್ದಾರೆ. ಡಿಸಿ ಕಚೇರಿ ಸೇರಿದಂತೆ ಉಳಿದ ಪ್ರಮುಖ ಕಚೇರಿಗಳನ್ನು ಕೂಡ ಸ್ಥಳಾಂತರ ಮಾಡಲಾಗಿದೆ. ಇನ್ನುಳಿದ ಕಚೇರಿಗಳು ಸದ್ಯಕ್ಕೆ ಬಂದ್ ಆಗಲಿವೆ ಎಂದು ತಿಳಿದುಬಂದಿದೆ.
- Advertisement -