- Advertisement -
- Advertisement -
ಉಡುಪಿ: ನಿರಂತರ ಮಳೆಯಿಂದಾಗಿ ರಾಜ್ಯದಲ್ಲಿ ಕೊಡಗು ಜಿಲ್ಲೆ ಅಪಾಯದಲ್ಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ರಾಜ್ಯದಲ್ಲಿ ಕೊಡಗು ಜಿಲ್ಲೆ ಅಪಾಯದಲ್ಲಿದೆ. ಅಲ್ಲಿಗೂ ಭೇಡಿ ಕೊಡುತ್ತೇನೆ. ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಪರಿಸ್ಥಿತಿ ಹತೋಟಿಗೆ ಬಂದಿದೆ. ಕಳೆದ ಬಾರಿಗಿಂತ ಈ ಬಾರಿ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತೇವೆ. ಎಲ್ಲಾ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಕರ್ತವ್ಯ ನಿರ್ವಹಿಸಬೇಕು. ಯಾರು ಕೂಡ ರಜೆ ತೆಗೆದುಕೊಳ್ಳುವಂತಿಲ್ಲ ಎಂದು ಆದೇಶಿಸಿರುವುದಾಗಿ ಆರ್.ಅಶೋಕ್ ಕೇಳಿದರು.
ಕರಾವಳಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಭಾರೀ ಮಳೆಯಾಗುತ್ತಿದೆ. ನದಿಗಳು ತುಂಬಿ ಹರಿಯುತ್ತಿದ್ದು, ಅರಬ್ಬೀ ಸಮುದ್ರ ಪ್ರಕ್ಷುಬ್ಧಗೊಂಡಿದೆ. ಜಿಲ್ಲೆಯಲ್ಲಿ ಅಲ್ಲಲ್ಲಿ ಕಡಲ್ಕೊರೆತ ಆಗಿದ್ದು, ಕಡಲ್ಕೊರೆತ ಸ್ಥಳಗಳನ್ನು ಭೇಟಿ ಮಾಡಿದ ಅಶೋಕ್ ಹಾನಿಯನ್ನು ಪರಿಶೀಲನೆ ನಡೆಸಿದರು. ಜೊತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಜಗದೀಶ್ ಮತ್ತು ತಹಶೀಲ್ದಾರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
- Advertisement -