- Advertisement -
- Advertisement -
ಕೊಡಗು: ಮಡಿಕೇರಿಯಲ್ಲಿ ವರುಣನ ಆರ್ಭಟ ಜೋರಾಗಿದೆ. ಈ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಕಳೆದೊಂದು ವಾರದಿಂದ ಜಿಲ್ಲೆಯಲ್ಲಿ ಬಿಸಿಲಿನ ವಾತಾವರಣವಿತ್ತು. ಆದರೆ ಭಾನುವಾರ ಮಧ್ಯಾಹ್ನದ ಬಳಿಕ ಮಳೆ ಚುರುಕುಪಡೆದುಕೊಂಡಿದ್ದು, ರಾತ್ರೀ ವೇಳೆ ಭಾರೀ ಗಾಳಿ ಸಹಿತ ಮಳೆಯಾಗಿದೆ. ಇನ್ನು ತಲಕಾವೇರಿ ಉಗಮ ಸ್ಥಾನ ಭಾಗಮಂಡಲದಲ್ಲಿ ವರುಣ ಅಬ್ಬರಿಸಿ ಬೊಬ್ಬಿರಿದಿದ್ದಾನೆ.
ಜಿಲ್ಲೆಯ ಹಲವೆಡೆ ನದಿಗಳೆಲ್ಲಾ ತುಂಬಿ ಹರಿಯುತ್ತಿದೆ. ಹೀಗಾಗಿ ಹಾರಂಗಿ ಡ್ಯಾಂ ಭರ್ತಿಯಾಗಿದೆ. ಮಡಿಕೇರಿ, ತಲಕಾವೇರಿ, ಭಾಗಮಂಡಲ, ವಿರಾಜಪೇಟೆ ಭಾಗಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ಇನ್ನು ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರು ಜಾಗರೂಕತೆಯಿಂದ ಇರಿ ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
- Advertisement -