Monday, July 22, 2024
spot_imgspot_img
spot_imgspot_img

ಕೊಡಗಿನಲ್ಲಿ ನಿಲ್ಲದ ವರುಣನ ಅಬ್ಬರ: ಹಲವೆಡೆ ಜಲಾವೃತ

- Advertisement -G L Acharya panikkar
- Advertisement -

ಮಡಿಕೇರಿ: ಕೊಡಗಿನಲ್ಲಿ ಪ್ರವಾಹ ಪರಿಸ್ಥಿತಿ ಇನ್ನೂ ನಿಂತಿಲ್ಲ. ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು,ಜನಜೀವನ ಅಸ್ತವ್ಯಸ್ತವಾಗಿದೆ. ಇದುವರೆಗೆ ಜಿಲ್ಲೆಯಲ್ಲಿ 52 ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದ್ದು, 14 ಪ್ರದೇಶಗಳಲ್ಲಿ ಭೂ ಕುಸಿತವಾಗಿದೆ. ಹೀಗಾಗಿ ಜಿಲ್ಲೆಯಲ್ಲಿ 9 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ಭೂಕುಸಿತದಿಂದ 8 ಕಡೆ ರಸ್ತೆ ಸಂಚಾರ ಬಂದ್:

ಭಾಗಮಂಡಲದ ಬ್ರಹ್ಮಗಿರಿಯಲ್ಲಿ ಗುಡ್ಡ ಕುಸಿದು ತಲಕಾವೇರಿ ದೇವಸ್ಥಾನದ ಅರ್ಚಕರ ಕುಟುಂಬ ಭೂ ಸಮಾಧಿಯಾಗಿದೆ. ಎನ್ ಡಿ ಆರ್ ಎಫ್ ತಂಡ ನಿರಂತರ ಕಾರ್ಯಾಚರಣೆ ನಡೆಸುತ್ತಿದೆ. ಆದರೆ ಭಾರೀ ಮಳೆ ಕಾರ್ಯಾಚರಣೆಗೆ ಅಡ್ಡಿ ಉಂಟು ಮಾಡುತ್ತಿದೆ. ಇನ್ನು ಭೂ ಕುಸಿತದಿಂದ ಜಿಲ್ಲೆಯ 8 ಕಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ. 566 ಮಂದಿ ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದೆ.

ಕುಶಾಲನಗರದ ಹಲವಾರು ಬಡಾವಣೆಗಳು ಜಲಾವೃತ:

ಧಾರಾಕಾರ ಮಳೆಯಿಂದಾಗಿ ಕುಶಾಲನಗರದ ಹಲವಾರು ಬಡಾವಣೆಗಳು ಜಲಾವೃತವಾಗಿವೆ. ಕುವೆಂಪು ಬಡಾವಣೆ, ಸಾಯಿ ಬಡಾವಣೆ, ಮುಳುಸೋಗೆ ಬಡಾವಣೆಯಲ್ಲಿ ಸುಮಾರು 10 ಅಡಿ ನೀರು ನಿಂತಿದೆ. ಅನೇಕ ಮನೆಗಳು ಜಲಾವೃತವಾಗಿವೆ.

- Advertisement -

Related news

error: Content is protected !!