- Advertisement -
- Advertisement -
ವರದಿ: ನ್ಯೂಸ್ ಡೆಸ್ಕ್, ವಿ ಟಿವಿ
ಬೆಂಗಳೂರು: ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗಿನಲ್ಲಿ ವರುಣ ಆರ್ಭಟ ಜೋರಾಗಿರುವುದರಿಂದ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಕರಾವಳಿಯಲ್ಲಿ ಇನ್ನೆರಡು ದಿನದ ಮಟ್ಟಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಮುನ್ಸೂಚನೆ ನೀಡಲಾಗಿದೆ. ನಿನ್ನೆ ಕೊಲ್ಲೂರಿನಲ್ಲಿ ಅತೀ ಹೆಚ್ಚು ಮಳೆಯಾಗಿದ್ದು, 17 ಸೆಂ.ಮೀ ಮಳೆ ಪ್ರಮಾಣ ದಾಖಲಾಗಿದೆ.
ಇನ್ನು ಮಲೆನಾಡಿನಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಧಾರಾಕಾರ ಮಳೆಯಿಂದಾಗಿ ಕೊಡಗಿನಲ್ಲಿ ಪ್ರವಾಹದ ಭೀತಿ ಎದುರಾಗಿದೆ. ತ್ರಿವೇಣಿ ಸಂಗಮ ತುಂಬಿ ರಸ್ತೆ ಮೇಲೆ ನದಿ ನೀರು ಹರಿಯುತ್ತಿದೆ. ಕೆಲವೆಡೆ ಗುಡ್ಡ ಕುಸಿತ ಕೂಡ ಸಂಭವಿಸಿದೆ. ಈ ಹಿನ್ನಲೆ ಕೊಡಗು ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ ಮಾಡಿದೆ.
- Advertisement -