- Advertisement -
- Advertisement -
ಮಡಿಕೇರಿ: ಮಡಿಕೇರಿಯ ಕೊಡಗು ಜಿಲ್ಲಾ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಲ್ವರು ವೈದ್ಯರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.

ಕೊಡಗು ವೈದ್ಯಾಕೀಯ ಮಹಾವಿದ್ಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಲ್ವರು ವೈದ್ಯರಿಗೆ ಹಾಗೂ ಮೂವರು ಸಿಬ್ಬಂದಿಗಳಿಗೆ ಪಾಸಿಟಿವ್ ಪತ್ತೆಯಾಗಿದೆ. ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇತರರಿಗೂ ಸೋಂಕು ಹರಡಿರುವ ಸಾಧ್ಯತೆಗಳಿದ್ದು, ಉಳಿದವರನ್ನು ಕೋವಿಡ್ ಪರೀಕ್ಷೆ ನಡೆಸಲು ಆಸ್ಪತ್ರೆಯ ಆಡಳಿತ ಮಂಡಳಿ ಹಿಂದೇಟು ಹಾಕುತ್ತಿದೆ ಎಂಬ ಮಾತುಗಳು ಕೇಳಿ ಬಂದಿದೆ. ಪಾಸಿಟಿವ್ ಪ್ರಕರಣ ಪತ್ತೆಯಾದರೂ ಉಳಿದವರನ್ನು ಕ್ವಾರಂಟೈನ್ ಹಾಗೂ ಆಸ್ಪತ್ರೆ ಸೀಲ್ ಡೌನ್ ಮಾಡುವ ಸಾಧ್ಯತೆಗಳಿವೆ.

- Advertisement -