- Advertisement -
- Advertisement -
ವಯನಾಡಿನ ನೆರವಿಗಾಗಿ ಕೇರಳ ಸರ್ಕಾರದ ಮೇಲೆ ಒತ್ತಡ ಹೇರಲು ರಾಹುಲ್ ಕರೆ



ವಯನಾಡು ಲೋಕಸಭಾ ಉಪಚುನಾವಣೆಯಲ್ಲಿ ಗೆಲುವಿನ ಬಳಿಕ ಮೊದಲ ಬಾರಿಗೆ ಪ್ರಿಯಾಂಕಾ ಗಾಂಧಿ ಅವರೊಂದಿಗೆ ರಾಹುಲ್ ಗಾಂಧಿ ಕ್ಷೇತ್ರಕ್ಕೆ ಭೇಟಿ ನೀಡಿದರು. ಬಳಿಕ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ರಾಹುಲ್, ಭೂಕುಸಿತದಿಂದ ಮೃತಪಟ್ಟವರಿಗೆ ಶ್ರದ್ಧಾಂಜಲಿ ಅರ್ಪಿಸಿ ಭಾಷಣವನ್ನು ಆರಂಭಿಸಿದರು.
‘ದುರದೃಷ್ಟವಶಾತ್, ನಾವು ಅಧಿಕಾರದಲ್ಲಿಲ್ಲ. ಆದ್ದರಿಂದ ಸರ್ಕಾರ ಮಾಡಬೇಕಾದ ಕೆಲಸವನ್ನು ಮಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಕಾಂಗ್ರೆಸ್ ಹಾಗೂ ಯುಡಿಎಫ್‌ನ ಪ್ರತಿಯೊಬ್ಬರೂ ಕೇರಳದ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಸಹೋದರಿ ಪ್ರಿಯಾಂಕಾ, ಕೆ.ಸಿ.ವೇಣುಗೋಪಾಲ್ ಅವರಿಗೆ ತಿಳಿಸಿದ್ದೇನೆ’ ಎಂದು ಹೇಳಿದರು.
ಪ್ರಿಯಾಂಕಾ ಗಾಂಧಿ ಮಾತನಾಡಿ ‘ಇಲ್ಲಿಗೆ ಬರಲು ಖುಷಿಯಾಗುತ್ತಿದೆ. ವಯನಾಡಿನ ಜನರ ಉತ್ತಮ ಭವಿಷ್ಯಕ್ಕಾಗಿ ನನ್ನಿಂದ ಸಾಧ್ಯವಿರುವ ಎಲ್ಲವನ್ನು ಮಾಡಲು ಸಿದ್ದನಿದ್ದೇನೆ’ ಎಂದು ಭರವಸೆ ನೀಡಿದರು.
- Advertisement -