- Advertisement -
- Advertisement -





ಕೋಲಾರ: ಕೆರೆಯಲ್ಲಿ ಈಜಲು ಹೋದ ಅಣ್ಣ-ತಮ್ಮ ಇಬ್ಬರೂ ನೀರುಪಾಲಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಲಕ್ಷ್ಮಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಚ್ಚರಮಾಕಲಹಳ್ಳಿ ಬಳಿ ಈ ದುರ್ಘಟನೆ ಸಂಭವಿಸಿದೆ. ಮಾಹಿತಿಯ ಪ್ರಕಾರ, ಗಾರೆ ಕೆಲಸಕ್ಕೆಂದು ಪಚ್ಚರಮಾಕಲಹಳ್ಳಿಗೆ ತೆರಳಿದ್ದ ಯುವಕರು ಮಧ್ಯಾಹ್ನದ ತೀವ್ರ ಬಿಸಿಲಿನ ತಾಪಮಾನದಿಂದಾಗಿ ಸಮೀಪದ ಕೆರೆಯಲ್ಲಿ ಈಜಲು ಇಳಿದಿದ್ದಾರೆ. ಈ ವೇಳೆ ನೀರಿನ ಆಳ ಅಂದಾಜಿಸಲು ಸಾಧ್ಯವಾಗದೆ ಇಬ್ಬರೂ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಮೃತಪಟ್ಟ ಯುವಕರನ್ನು ರೋಣೂರು ಹೋಬಳಿ ವ್ಯಾಪ್ತಿಯ ಚಾಂಪಲ್ಲಿ ಗ್ರಾಮದ ನಿವಾಸಿಗಳಾದ ನರೇಂದ್ರ (25) ಹಾಗೂ ಚಂದನ್ (23) ಎಂದು ಗುರುತಿಸಲಾಗಿದೆ. ರಾಯಲ್ಪಾಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇಬ್ಬರು ಸಹ ಅಣ್ಣ ತಮ್ಮಂದಿರಾಗಿದ್ದು, ಯಾವುದೇ ಪ್ರಕರಣ ದಾಖಲಾಗದ ಹಿನ್ನೆಲೆ ಮರಣೋತ್ತರ ಪರೀಕ್ಷೆ ನಡೆದಿಲ್ಲ. ಹಿರಿಯರ ಸಮ್ಮುಖದಲ್ಲಿ ಸಂಬಂಧಿಕರು ಅಂತ್ಯಸಂಸ್ಕಾರ ಮಾಡಿದ್ದಾರೆ ಎಂದು ವರದಿ ಮೂಲಕ ತಿಳಿದುಬಂದಿದೆ.
- Advertisement -








