Monday, October 5, 2026
spot_imgspot_img
spot_imgspot_img

ಕೋಲಾರ: ನಕಲಿ ಹಾಲು ತಯಾರು: ಆರೋಪಿಗಳ ಬಂಧನ !

- Advertisement -
- Advertisement -

ಕೋಲಾರ: ರಾಸಾಯನಿಕ ವಸ್ತು ಬಳಸಿ ನಕಲಿ ಹಾಲು ತಯಾರು ಮಾಡುತ್ತಿದ್ದ ಅಡ್ಡೆ ಮೇಲೆ ಕೆಜಿಎಫ್ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿದ್ದಾರೆ. ಆಂಧ್ರ ಮೂಲದ ದಿಲೀಪ್, ಬಾಲರಾಜ್, ವೆಂಕಟೇಶಪ್ಪ, ಬಾಲಾಜಿ ಮತ್ತು ಮನೋಹರ್ ಬಂಧಿತರು. ಆರೋಪಿಗಳು ಕೆಜಿಎಫ್ ತಾಲೂಕಿನ ಬಳ್ಳಗೆರೆ ಗ್ರಾಮದ ಬಳಿ ಅಕ್ರಮ ಕಲಬೆರಕೆ ಹಾಲು ತಯಾರಿಸುತ್ತಿದ್ದರು.

ಬಂಧಿತರಿಂದ ಸುಮಾರು 22 ಲಕ್ಷ ರೂ. ಮೌಲ್ಯದ ಉಪಕರಣ ಹಾಗೂ ಕಲಬೆರೆಕೆಗೆ ಬಳಸುತ್ತಿದ್ದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಪಾಮಾಯಲ್, ಮಿಲ್ಕ್ ಪೌಡರ್, ಅಂಗನವಾಡಿ ಮಕ್ಕಳಿಗೆ ನೀಡುವ ಪೌಷ್ಟಿಕ ಆಹಾರ ಪುಷ್ಟಿ ಪೌಡರ್, ಲಡ್ಡು, ಹಾಲಿನ ಕ್ಯಾನ್‌ ಗಳು, ಎರಡು ಲಗೇಜ್ ಹಾಗೂ ಆಟೋಗಳನ್ನು ವಶಕ್ಕೆ ಪಡೆಯಲಾಗಿದೆ.

- Advertisement -

Related news

error: Content is protected !!