Tuesday, July 21, 2026
spot_imgspot_img
spot_imgspot_img

ಕೋಲಾರ: ರಸ್ತೆ ಅಪಘಾತ; ಬೈಕ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ-ಓರ್ವ ಸಾವು

- Advertisement -
- Advertisement -

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹಕ್ಕಿಪಿಕ್ಕಿ ಕಾಲೋನಿ ಬಳಿ ವೇಗವಾಗಿ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದು ಬಳಿಕ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗುದ್ದಿ ಪಲ್ಟಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಿನ್ನೆ(ಮಾ.4) ಸಂಭವಿಸಿದೆ.

ಕಾರಿನಲ್ಲಿದ್ದ ಆಂಧ್ರಪ್ರದೇಶ ಮೂಲದ ಬಶೀರ್(40) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮತ್ತೊಬ್ಬ ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್‌ನಲ್ಲಿದ್ದ ಸವಾರರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ.

ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಧಾವಿಸಿದ ರಾಯಲ್ಪಾಡು ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ, ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!