





ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಬಂಡಾಯ ನಾಯಕರು ತೃಣಮೂಲ ಕಾಂಗ್ರೆಸ್(ಟಿಎಂಸಿ) ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿದ್ದಾರೆ. ಜೊತೆಗೆ ಮಮತಾ ಬ್ಯಾನರ್ಜಿ ಅವರ ಸೋದರ ಸಂಬಂಧಿ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರನ್ನೂ ಪಕ್ಷದಿಂದ ಅಮಾನತುಗೊಳಿಸಲಾಗಿದೆ.
ಕೋಲ್ಕತ್ತಾದ ನ್ಯೂಟೌನ್‌ನಲ್ಲಿರುವ ಪಂಚತಾರಾ ಹೋಟೆಲ್‌ನಲ್ಲಿ ನಡೆದ ಬಂಡಾಯ ಬಣದ ತರಾತುರಿಯ ವಿಶೇಷ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ರುತಬ್ರತಾ ಬ್ಯಾನರ್ಜಿ ನೇತೃತ್ವದ ಬಂಡಾಯ ಶಿಬಿರವು ಮಮತಾ ಬ್ಯಾನರ್ಜಿ ಅವರನ್ನು ಹುದ್ದೆಯಿಂದ ವಜಾಗೊಳಿಸಿ, ಮಾಜಿ ಸಚಿವ ಹಾಗೂ ಹಿರಿಯ ಶಾಸಕ ಅರೂಪ್ ರಾಯ್ ಅವರನ್ನು ಟಿಎಂಸಿಯ ಹೊಸ ಅಖಿಲ ಭಾರತ ಅಧ್ಯಕ್ಷರನ್ನಾಗಿ ಘೋಷಣೆ ಮಾಡಿದೆ.
ಪಕ್ಷದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ಕಾರ್ಯವೈಖರಿ ವಿರುದ್ಧ ಬಂಡಾಯ ನಾಯಕರು ಅಸಮಾಧಾನಗೊಂಡಿದ್ದರು. ಹೀಗಾಗಿ ಅವರನ್ನು ಪಕ್ಷದಿಂದ ಅಮಾನತುಗೊಳಿಸುವ ನಿರ್ಣಯಕ್ಕೆ ಸರ್ವಾನುಮತ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.








