Wednesday, June 24, 2026
spot_imgspot_img
spot_imgspot_img

ನಿರ್ಮಾಣ ಹಂತದ ಗೋದಾಮಿನ ಮೇಲ್ಛಾವಣಿ ಕುಸಿತ; 5 ಮಂದಿ ಸಾವು, 23 ಕಾರ್ಮಿಕರು ಸಿಲುಕಿರುವ ಶಂಕೆ

- Advertisement -
- Advertisement -

ಕೋಲ್ಕತ್ತಾ: ನಿರ್ಮಾಣ ಹಂತದಲ್ಲಿದ್ದ ಗೋದಾಮಿನ ಮೇಲ್ಛಾವಣಿ ಏಕಾಏಕಿ ಕುಸಿದ ಪರಿಣಾಮ ಹಲವು ಕಾರ್ಮಿಕರು ಕುಸಿದ ಮೇಲ್ಛಾವಣಿಯಡಿ ಸಿಲುಕಿರುವ ಘಟನೆ ಪಶ್ಚಿಮ ಬಂಗಾಳದ ಕೋಲ್ಕತ್ತಾದ ತಾರತಲಾ ಪ್ರದೇಶದಲ್ಲಿ ನಡೆದಿದೆ.

ಇಂದು ಮಧ್ಯಾಹ್ನ ಈ ಅವಘಡ ಸಂಭವಿಸಿದೆ. ಪಶ್ಚಿಮ ಕೋಲ್ಕತ್ತಾದ ಬ್ರೇಸ್ ಬ್ರಿಡ್ಜ್ ಸಮೀಪದ ಟ್ರಾನ್ಸ್‌ಪೋರ್ಟ್ ಡಿಪೋ ರಸ್ತೆಯಲ್ಲಿರುವ ನಿರ್ಮಾಣ ಹಂತದ ಗೋದಾಮಿನ ಮೇಲ್ಛಾವಣಿ ಏಕಾಏಕಿ ಕುಸಿದು ಬಿದ್ದಿದೆ. ಘಟನೆ ನಡೆದ ವೇಳೆ ಕಾರ್ಮಿಕರು ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಮೇಲ್ಛಾವಣಿ ಕುಸಿದ ತಕ್ಷಣ ಹಲವರು ಮೇಲ್ಛಾವಣಿ ಅಡಿ ಸಿಲುಕಿದ್ದಾರೆ. ಸುಮಾರು 23 ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಕೋಲ್ಕತ್ತಾ ಪೊಲೀಸರು, ಅಗ್ನಿಶಾಮಕ ದಳ, ವಿಪತ್ತು ನಿರ್ವಹಣಾ ಪಡೆ ಹಾಗೂ ನಾಗರಿಕ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಇಲ್ಲಿಯವರೆಗೆ 7 ಮಂದಿಯನ್ನು ರಕ್ಷಿಸಲಾಗಿದೆ. ಇನ್ನೂ ಹಲವರು ಕಟ್ಟಡದಲ್ಲಿ ಸಿಲುಕಿರುವ ಸಾಧ್ಯತೆ ಇದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ.

ಭಾರೀ ಕಬ್ಬಿಣದ ಕಂಬಗಳು ಹಾಗೂ ಕಟ್ಟಡದ ವಸ್ತುಗಳನ್ನು ಕ್ರೇನ್‌ಗಳ ಸಹಾಯದಿಂದ ತೆರವುಗೊಳಿಸಲಾಗುತ್ತಿದೆ. ಸಿಲುಕಿರುವ ಕಾರ್ಮಿಕರನ್ನು ತಲುಪಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಅವಘಡ ಸಂಭವಿಸಿದ ವೇಳೆ ಸ್ಥಳದಲ್ಲಿ ಒಟ್ಟು ಎಷ್ಟು ಕಾರ್ಮಿಕರು ಇದ್ದರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಮೇಲ್ಛಾವಣಿ ಕುಸಿತಕ್ಕೆ ನಿಖರ ಕಾರಣವೂ ತಿಳಿದುಬಂದಿಲ್ಲ.

- Advertisement -

Related news

error: Content is protected !!