Monday, November 16, 2026
spot_imgspot_img
spot_imgspot_img

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಹೆಚ್.ಡಿ. ಕುಮಾರಸ್ವಾಮಿ ಭೇಟಿ

- Advertisement -
- Advertisement -

ಉಡುಪಿ: ಜಿಲ್ಲಾ ಪ್ರವಾಸದಲ್ಲಿರುವ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸೋಮವಾರ(ನ.16) ಮುಂಜಾನೆ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಶ್ರೀ ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಅವರು, ದೇವಸ್ಥಾನದಲ್ಲಿ ನಡೆಯುತ್ತಿರುವ ನವಚಂಡಿಕಾಯಾಗದಲ್ಲೂ ಪಾಲ್ಗೊಂಡರು. ಪತ್ನಿಯೊಂದಿಗೆ ಆಗಮಿಸಿದ ಕುಮಾರಸ್ವಾಮಿ ಅವರು ಅರ್ಚಕರ ನೇತೃತ್ವದಲ್ಲಿ ಸಂಕಲ್ಪ ವಿಧಿಯಲ್ಲಿ ಭಾಗಿಯಾದರು.

ಸುಮಾರು ನಾಲ್ಕು ವರ್ಷಗಳ ಹಿಂದೆ ಮಾಡಿಕೊಂಡ ಹರಕೆಯ ಹಿನ್ನೆಲೆಯಲ್ಲಿ ಹಾಗೂ ದೋಷ ಪರಿಹಾರಾರ್ಥವಾಗಿ ನವಚಂಡಿಕಾಯಾಗವನ್ನು ನೆರವೇರಿಸಲಾಗುತ್ತಿದೆ. ಕೊಲ್ಲೂರಿನ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಬಳಿಕ ಕುಮಾರಸ್ವಾಮಿ ಅವರು ಉಡುಪಿ ಜಿಲ್ಲೆಯ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

ಮಧ್ಯಾಹ್ನ 12:30ರ ಸುಮಾರಿಗೆ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ದಕ್ಷಿಣ ಕನ್ನಡ ಜಿಲ್ಲೆಯತ್ತ ತಮ್ಮ ಪ್ರವಾಸವನ್ನು ಮುಂದುವರಿಸಲಿದ್ದಾರೆ ಎಂಬುದಾಗಿ ಮೂಲಗಳಿಂದ ತಿಳಿದುಬಂದಿದೆ.

- Advertisement -

Related news

error: Content is protected !!