- Advertisement -
- Advertisement -





ಕೊಣಾಜೆ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಗುರುವಾರ(ಸೆ.17) ಬೆಳಿಗ್ಗೆ ನಾಟೆಕಲ್ ಸಮೀಪದ ಪನೀರು ಚರ್ಚ್ ಬಳಿಯ ತಿರುವಿನಲ್ಲಿ ನಡೆದಿದೆ.
ದೇರಳಕಟ್ಟೆಯ ಖಾಸಗಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ದೇರಳಕಟ್ಟೆಯಿಂದ ಬೀರಿ ಕಡೆಗೆ ಸ್ವಿಫ್ಟ್ ಕಾರಿನಲ್ಲಿ ತೆರಳುತ್ತಿದ್ದಾಗ ಪನೀರು ಚರ್ಚ್ ತಿರುವಿನಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ.
ಪಲ್ಟಿಯಾದ ಕಾರು ಪಕ್ಕದಲ್ಲಿದ್ದ ಟ್ರಾನ್ಸ್ಫಾರ್ಮರ್ ಕಂಬಕ್ಕೆ ಒರಗಿ ನಿಂತಿದ್ದು, ಅದೃಷ್ಟವಶಾತ್ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿ ಮೂಲಕ ತಿಳಿದುಬಂದಿದೆ.
- Advertisement -








