Tuesday, July 21, 2026
spot_imgspot_img
spot_imgspot_img

ಕೊಪ್ಪಳ: ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 200 ಟನ್‌ ಅನ್ನಭಾಗ್ಯ ಅಕ್ಕಿ ಜಪ್ತಿ

- Advertisement -
- Advertisement -

ಕೊಪ್ಪಳ: ತಾಲೂಕಿನ ಕೂಕನಪಳ್ಳಿ ಗ್ರಾಮದ ಹೊರವಲಯದ ಜಮೀನಿನಲ್ಲಿರುವ ಗೋಡೌನ್‌ ಒಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸುಮಾರು 150–200 ಟನ್‌ ಅನ್ನಭಾಗ್ಯ ಅಕ್ಕಿಯನ್ನು ಮುನಿರಾಬಾದ್ ಪೊಲೀಸರು ಜಪ್ತಿ ಮಾಡಿದ್ದಾರೆ.

ಗಾಳೆಪ್ಪ ಎಂಬವರಿಗೆ ಸೇರಿದ ಜಮೀನಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅಪಾರ ಪ್ರಮಾಣದ ಪಡಿತರ ಅಕ್ಕಿಯನ್ನು ವಶಪಡಿಸಿ ಕೊಳ್ಳಲಾಗಿದ್ದು, ಖಚಿತ ಮಾಹಿತಿ ಆಧಾರದ ಮೇಲೆ ಮುನಿರಾಬಾದ್ ಪೊಲೀಸರು ದಾಳಿ ನಡೆಸಿದ್ದು, ದಾಳಿ ವೇಳೆ ಸಾವಿರಕ್ಕೂ ಅಧಿಕ ಪಡಿತರ ಅಕ್ಕಿ ತುಂಬಿದ್ದ ಮೂಟೆಗಳು ಸಿಕ್ಕಿವೆ. ಸಿಕ್ಕಿರುವ ಅಕ್ಕಿ 150 ರಿಂದ 200 ಟನ್ ಆಗಬಹುದು ಎಂದು ಅಂದಾಜಿಸಲಾಗಿದೆ.

ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟ ಸುದ್ದಿ ತಿಳಿದ ಬಳಿಕ ಆಹಾರ ಇಲಾಖೆ ಅಧಿಕಾರಿಗಳು ಸಹ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದು, ಈ ಸಂಬಂಧ ಮುನಿರಾಬಾದ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂಬುದಾಗಿ ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!