Tuesday, August 4, 2026
spot_imgspot_img
spot_imgspot_img

ಕೊಪ್ಪಳ: ಬಿಜೆಪಿ ಮುಖಂಡ ವೆಂಕಟೇಶ ಕುರುಬರ ಹತ್ಯೆ ಪ್ರಕರಣ: ರವಿ ಸೇರಿ 6 ಆರೋಪಿಗಳಿಗೆ ಗಲ್ಲು ಶಿಕ್ಷೆ

- Advertisement -
- Advertisement -

ಗಂಗಾವತಿ: 2025ರಲ್ಲಿ ಕೊಪ್ಪಳ ರಸ್ತೆಯಲ್ಲಿ ನಡೆದ ಬಿಜೆಪಿ ಮುಖಂಡ ವೆಂಕಟೇಶ ಕುರುಬರ ಹತ್ಯೆ ಪ್ರಕರಣದಲ್ಲಿ ಆರು ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಗಂಗಾವತಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ. ನ್ಯಾಯಾಧೀಶ ಸದಾನಂದಪ್ಪ ನಾಯ್ಕ ಅವರು ಆರೋಪಿಗಳಾದ ರವಿ, ವಿಜಯ, ಧನರಾಜ್, ಭರತ್, ಸಲೀಂ ಹಾಗೂ ಗಂಗಾಧರ ಗೌಳಿ ಅವರಿಗೆ ಗಲ್ಲು ಶಿಕ್ಷೆ ವಿಧಿಸಿದ್ದಾರೆ.

2025ರಲ್ಲಿ ಗಂಗಾವತಿಯ ಕೊಪ್ಪಳ ರಸ್ತೆಯಲ್ಲಿ ಬಿಜೆಪಿ ಮುಖಂಡ ವೆಂಕಟೇಶ ಕುರುಬರ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆ ಮಾಡಿದ್ದರು. ಈ ಘಟನೆ ರಾಜ್ಯಾದ್ಯಂತ ಸಂಚಲನ ಮೂಡಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಒಟ್ಟು 83 ಸಾಕ್ಷಿಗಳ ವಿಚಾರಣೆ ನಡೆಸಲಾಗಿತ್ತು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ನಾಗಲಕ್ಷ್ಮೀ ವಾದ ಮಂಡಿಸಿದ್ದರು.

- Advertisement -

Related news

error: Content is protected !!