Sunday, July 19, 2026
spot_imgspot_img
spot_imgspot_img

ಕೊಪ್ಪಳ: ಕ್ರೂಸರ್‍ ವಾಹನ ಪಲ್ಟಿ; ಓರ್ವ ಸಾವು, 7 ಮಂದಿಗೆ ಗಾಯ

- Advertisement -
- Advertisement -

ಕೊಪ್ಪಳ: ಅಂಜನಾದ್ರಿ ಬೆಟ್ಟಕ್ಕೆ ಹೊರಟಿದ್ದ ಭಕ್ತರ ವಾಹನದ ಟೈರ್ ಸ್ಫೋಟಗೊಂಡು ಪಲ್ಟಿಯಾದ ಭೀಕರ ಅಪಘಾತದಲ್ಲಿ ಓರ್ವ ಭಕ್ತ ಮೃತಪಟ್ಟು, ಏಳು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಸುಡುಬಿಸಿಲಿನಲ್ಲಿ ಚಲಿಸುತ್ತಿದ್ದ ವಾಹನದ ಟೈರ್ ದಿಢೀರನೆ ಬ್ಲಾಸ್ಟ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ವಾಹನ ರಸ್ತೆಯಲ್ಲೇ ಪಲ್ಟಿಯಾಗಿದೆ. ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ವಾಹನದಲ್ಲಿದ್ದ ಇಬ್ಬರು ಪ್ರಯಾಣಿಕರ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ಅದೃಷ್ಟವಶಾತ್ ಕ್ರೂಷರ್‌ನಲ್ಲಿದ್ದ ಉಳಿದ ಏಳು ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಕೊಪ್ಪಳ ಗ್ರಾಮೀಣ ಪೊಲೀಸರು ಗಾಯಾಳುಗಳನ್ನು ತಕ್ಷಣವೇ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!