- Advertisement -
- Advertisement -





ಕೊಪ್ಪಳ: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಯರೇಹಂಚಿನಾಳ ಗ್ರಾಮದ ಸಮೀಪ ನಡೆದಿದೆ.
ಮೃತರನ್ನು ಗದಗ ಜಿಲ್ಲೆಯ ತಿಮ್ಮಾಪೂರ ಗ್ರಾಮದ ಲಕ್ಷ್ಮವ್ವ ಹರಣಸಿಕಾರಿ(15) ಹಾಗೂ ಮುತ್ತವ್ವ ಹರಣಸಿಕಾರಿ(8) ಎಂದು ಗುರುತಿಸಲಾಗಿದೆ. ಯರೇಹಂಚಿನಾಳ ಗ್ರಾಮದಿಂದ ಗದಿಗೆ ಹೋಗುವ ರಸ್ತೆ ಪಕ್ಕದಲ್ಲಿರುವ 362ನೇ ಸರ್ವೆ ನಂಬರಿನ ಕೃಷಿ ಹೊಂಡಕ್ಕೆ ಬಟ್ಟೆ ತೊಳೆಯಲು ತೆರಳಿದ್ದ ವೇಳೆ ಕಾಲು ಜಾರಿ ನೀರಿಗೆ ಬಿದ್ದ ಪರಿಣಾಮ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಮಕ್ಕಳ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕೆಂದು ಸ್ಥಳೀಯರು ಹಾಗೂ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ಕುಕನೂರು ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂಬುದಾಗಿ ವರದಿ ಮುಲಕ ತಿಳಿದುಬಂದಿದೆ.
- Advertisement -








