Sunday, June 28, 2026
spot_imgspot_img
spot_imgspot_img

ಪ್ರಿಯಕರನಿಂದಲೇ ನಡೆಯಿತು ಘೋರ ಕೃತ್ಯ; ಯುವತಿಯನ್ನು ಕೊಂದು ಕೊಳವೆ ಬಾವಿಯಲ್ಲಿ ಹೂತಿಟ್ಟ ಪ್ರೇಮಿ!!

- Advertisement -
- Advertisement -

ಕೊಪ್ಪಳ: ಪ್ರಿಯಕರನೇ ಯುವತಿಯನ್ನು ಕೊಂದು ಕೊಳವೆ ಬಾವಿಯಲ್ಲಿ ಶವವನ್ನು ಹೂತು ಹಾಕಿದ ಘಟನೆ ಯಲಬುರ್ಗಾ ತಾಲ್ಲೂಕಿನ ಗ್ರಾಮವೊಂದರಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಯುವಕ ಮೃತ ಯುವತಿಯ ಸಂಬಂಧಿ ಆಗಿದ್ದು, ಆತ ಆಕೆಯನ್ನು ಮನೆಯಲ್ಲಿ ಇಟ್ಟುಕೊಂಡಿದ್ದನು. ಇನ್ನೆರಡು ತಿಂಗಳಲ್ಲಿ 18 ವರ್ಷ ಪೂರ್ಣವಾದ ನಂತರ ಆಕೆಯನ್ನು ಮದುವೆಯಾಗಲು ಸಿದ್ಧತೆ ನಡೆಸಿದ್ದು, ಈ ನಡುವೆ ಇಬ್ಬರ ನಡುವೆ ಜಗಳವಾಗುತ್ತಿತ್ತು ಎನ್ನಲಾಗಿದೆ.

15 ದಿನಗಳ ಹಿಂದೆ ಜಗಳ ವಿಕೋಪಕ್ಕೆ ತಿರುಗಿ ಆಕೆಯನ್ನು ಕೊಲೆ ಮಾಡಿ ಬಳಿಕ ಮೃತದೇಹವನ್ನು ಕೆರೆ ಸಮೀಪದ ಜಮೀನೊಂದರ ವಿಫಲ ಕೊಳವೆಬಾವಿಯಲ್ಲಿ ಹೂತು ಹಾಕಿದ್ದಾನೆ. ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ವಿಫಲ ಕೊಳವೆ ಬಾವಿಯಲ್ಲಿ ಹೂತು ಹಾಕಿದ್ದ ಮೃತದೇಹವನ್ನು ಜೆಸಿಬಿಯಿಂದ ಹೊರ ತೆಗೆಯಲಾಗಿದೆ ಎಂದು ತಿಳಿದುಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಯಲಬುರ್ಗಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!