Sunday, July 26, 2026
spot_imgspot_img
spot_imgspot_img

ಹಿಂಸಾರೂಪಕ್ಕೆ ತಿರುಗಿದ ವಿಸ್ಟ್ರಾನ್ ಕಂಪನಿ ನೌಕರರ ಪ್ರತಿಭಟನೆ

- Advertisement -
- Advertisement -

ಕೋಲಾರ: ಕಳೆದ ನಾಲ್ಕು ತಿಂಗಳಿನಿಂದ ವೇತನ ನೀಡದ್ದರಿಂದ ಕೋಲಾರದ ವಿಸ್ಟ್ರಾನ್ ಕಂಪನಿ ವಿರುದ್ಧ ಶನಿವಾರ ಸಿಡಿದೆದ್ದ ನೌಕರರು ಪ್ರತಿಭಟನೆಗಿಳಿದಿದ್ದು, ಹಿಂಸಾರೂಪಕ್ಕೆ ತಿರುಗಿದೆ.

ಬಾಕಿ ವೇತನ ನೀಡುವಂತೆ ಆಗ್ರಹಿಸಿ ಪ್ರತಿಭಟನೆಗೆ ಇಳಿದಿರುವ ನೌಕರರು ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದ್ದಲ್ಲದೆ, ವಾಹನಗಳಿಗೆ ಬೆಂಕಿ ಹಚ್ಚಿಯೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋಲಾರ ತಾಲೂಕಿನ ಕೈಗಾರಿಕಾ ಪ್ರದೇಶದಲ್ಲಿರುವಂತ ವಿಸ್ಟ್ರಾನ್ ಕಂಪನಿಯಿಂದ ಕಳೆದ ನಾಲ್ಕು ತಿಂಗಳಿನಿಂದ ವೇತನ ನೀಡಿಲ್ಲ.ಇದರಿಂದಾಗಿ ಬಾಕಿ ವೇತನ ನೀಡುವಂತೆ ಆಗ್ರಹಿಸಿ ಕಂಪನಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನೆ ಉಗ್ರ ಸ್ವರೂಪ ತಾಳಿದ್ದು, ಬಾಕಿ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ನೌಕರರು ವಿಸ್ಟ್ರಾನ್ ಕಂಪನಿಯ ಕಚೇರಿಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕಚೇರಿಯ ಮುಂದೆ ನಿಲ್ಲಿಸಿದ್ದ ಕಾರುಗಳಿಗೂ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

- Advertisement -

Related news

error: Content is protected !!