- Advertisement -
- Advertisement -
ಬೆಂಗಳೂರು: ಕೊರೊನಾ ಸೋಂಕು ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ಸಂಪೂರ್ಣ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕೊರೊನಾ ಪಾಸಿಟಿವ್ ಬಂದ ಬಳಿಕ ಸಿಎಂ ಆಗಸ್ಟ್ 2ರಂದು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಸುಮಾರು 9 ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಕೊರೊನಾ ಪರೀಕ್ಷೆ ವರದಿ ನೆಗೆಟಿವ್ ಬಂದಿದೆ. ಹೀಗಾಗಿ ಸಿಎಂ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನು ಡಿಸ್ಚಾರ್ಜ್ ಆಗುವ ಮೊದಲು ಮಣಿಪಾಲ ಆಸ್ಪತ್ರೆ ಸಿಬ್ಬಂದಿ ಜತೆ ಮಾತುಕತೆ ನಡೆಸಿದ್ರು. ನಂತರ ಉತ್ತಮ ಚಿಕಿತ್ಸೆ ನೀಡಿದಕ್ಕೆ ಅವರಿಗೆ ಕೃತಜ್ಞತೆ ಸಲ್ಲಿಸಿದರು.
- Advertisement -