Friday, March 29, 2024
spot_imgspot_img
spot_imgspot_img

ಕೊರೊನಾ ಗೆದ್ದ ಖ್ಯಾತ ಗಾಯಕ ಎಸ್.ಬಿ.ಬಾಲಸುಬ್ರಹ್ಮಣ್ಯಂ

- Advertisement -G L Acharya panikkar
- Advertisement -

ಬೆಂಗಳೂರು: ಖ್ಯಾತ ಗಾಯಕ ಎಸ್.ಬಿ.ಬಾಲಸುಬ್ರಹ್ಮಣ್ಯಂ ಅವರ ಕೊರೊನಾ ವರದಿ ನೆಗೆಟಿವ್ ಬಂದಿದೆ. ಸದ್ಯ ಅವರಿಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿದಿದೆ.

ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಕಳೆದ 19 ದಿನಗಳ ಹಿಂದೆ ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಕಳೆದ 9 ದಿನಗಳಿಂದ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ನಿನ್ನೆ ನಡೆದ ಕೊರೊನಾ ಟೆಸ್ಟ್ ವರದಿ ನೆಗೆಟಿವ್ ಬಂದಿದ್ದು, ಅಭಿಮಾನಿ ಬಳಗದಲ್ಲಿ ಹೊಸ ಚೈತನ್ಯ ಮೂಡಿದೆ.

ಈ ಬಗ್ಗೆ ಗೀತ ಸಾಹಿತಿ ಕೆ.ಕಲ್ಯಾಣ್ ಮಾಹಿತಿ ನೀಡಿದ್ದು, ಎಸ್ ಪಿಬಿ ಅವರ ಆರೋಗ್ಯ ಸ್ಥಿರವಾಗಿದೆ. ವೂದ್ಯ ಲೋಕದ ಎಲ್ಲ ಪ್ರಯೋಗಗಳ ಮೂಲಕ ಸ್ವರ ಸಾಮ್ರಾಟನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಕೊರೊನಾದಿಂದ ಮುಕ್ತರಾಗಿದ್ದಾರೆ ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!