Monday, July 27, 2026
spot_imgspot_img
spot_imgspot_img

ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ನಗರದ ನೆಹರು ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ.

- Advertisement -
- Advertisement -

ಮಂಗಳೂರು:-ಕೊರೊನಾ ಮಧ್ಯೆ ಸ್ವಾತಂತ್ರ್ಯ ದಿನಾಚರಣೆಯನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ನಗರದ ನೆಹರು ಮೈದಾನದಲ್ಲಿ  ಸರಳವಾಗಿ ಕಾರ್ಯಕ್ರಮ ನೆರವೇರಿತು.

ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಕೋಟಾ ಶ್ರೀನಿವಾಸ್ ಪೂಜಾರಿ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು. ಬಿ.ಜೆ.ಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್,ಮಂಗಳೂರು ಉತ್ತರ ಕ್ಷೇತ್ರದ ಭರತ್ ಶೆಟ್ಟಿ ಸೇರಿದಂತೆ ಅನೇಕ ಜನಪ್ರತಿನಿಧಿಗಳು ಭಾಗಿಯಾಗಿದ್ದರು.

ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ, ನಗರ ಪೊಲೀಸ್ ಕಮೀಷನರ್ ವಿಕಾಶ್ ಕುಮಾರ್ ವಿಕಾಶ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ನಿರ್ಬಂಧ ಇತ್ತು. ಸ್ವಾತಂತ್ರ್ಯ ದಿನಾಚರಣೆ ವೀಕ್ಷಣೆಗಾಗಿ ಸಾರ್ವಜನಿಕರಿಗೆ  ಜಿಲ್ಲಾಡಳಿದ ಅಧಿಕೃತ ಯೂಟ್ಯೂಬ್ ಚಾನೆಲ್ ಮೂಲಕ ನೇರಪ್ರಸಾರ ಕಲ್ಪಿಸಲಾಗಿದೆ. ಕೊರೊನಾ ಕಾರಣದಿಂದ ಸಾರ್ವಜನಿಕರಿಗೆ ಮೈದಾನಕ್ಕೆ ನಿರ್ಬಂಧ ಹೇರಲಾಗಿತ್ತು.

- Advertisement -

Related news

error: Content is protected !!