- Advertisement -
- Advertisement -
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಗುರುಪುರದ ಬಂಗ್ಲೆ ಗುಡ್ಡೆಯಲ್ಲಿ ನಡೆದ ಗುಡ್ಡ ಕುಸಿತ ಪ್ರಕರಣದಲ್ಲಿ ಮೃತಪಟ್ಟ ಮಕ್ಕಳ ಕುಟುಂಬಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದರು.

ಸಾವನ್ನಪ್ಪಿದವರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಮೊತ್ತವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸೋಮವಾರ ವಿತರಿಸಿದರು. ಈ ಸಂದರ್ಭ ಶಾಸಕ ಉಮಾನಾಥ ಕೋಟ್ಯಾನ್, ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಉಪಸ್ಥಿತರಿದ್ದರು.

- Advertisement -