Friday, May 17, 2024
spot_imgspot_img
spot_imgspot_img

ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕರಾಗಿ ಕೋಟ ಶ್ರೀನಿವಾಸ ಪೂಜಾರಿ ನೇಮಕ

- Advertisement -G L Acharya panikkar
- Advertisement -

ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕರಾಗಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಕುರಿತಾಗಿ ಭಾರತೀಯ ಜನತಾ ಪಾರ್ಟಿ ರಾಜ್ಯಾಧ್ಯಕ್ಷರಾಗಿರು ಬಿ.ವೈ ವಿಜಯೇಂದ್ರ ಅವರು ಅಧಿಕೃತವಾಗಿ ಆದೇಶ ಹೊರಡಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆದೇಶ ಹೊರಡಿಸಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದಂತ ಜೆಪಿ ನಡ್ಡಾ ಅವರ ಸೂಚನೆಯ ಮೇರೆಗೆ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ವಿವಿಧ ಜವಾಬ್ದಾರಿಗಳಿಗೆ ನಿಯುಕ್ತಿಗೊಳಿಸಲಾಗಿದೆ ಎಂದಿದ್ದಾರೆ. ವಿಧಾನ ಪರಿಷತ್ ವಿಪಕ್ಷ ನಾಯಕನ ಜೊತೆಗೆ ವಿಧಾನಸಭೆ ಉಪ ನಾಯಕ, ಮುಖ್ಯ ಸಚೇತಕರನ್ನು ಸಹ ನೇಮಕ ಮಾಡಲಾಗಿದೆ. ವಿಧಾನಪರಿಷತ್‌ ವಿಪಕ್ಷ ಉಪನಾಯಕನಾಗಿ ಸುನೀಲ್ ವಲ್ಯಾಪುರೆ ಅವರನ್ನು ನೇಮಕ ಮಾಡಿದರೆ, ವಿಧಾನಸಭೆಯ ವಿಪಕ್ಷ ಉಪ ನಾಯಕನಾಗಿ ಅರವಿಂದ ಬೆಲ್ಲದ್ ನೇಮಕವಾಗಿದ್ದಾರೆ. ಹಾಗೆಯೇ ವಿಧಾನಸಭೆಯ ಮುಖ್ಯ ಸಚೇತಕರಾಗಿ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ಆಯ್ಕೆಯಾದರೆ, ವಿಧಾನಪರಿಷತ್‌ ಮುಖ್ಯ ಸಚೇತಕರಾಗಿ ಎನ್.ರವಿಕುಮಾರ್ ಅವರನ್ನು ನೇಮಿಸಲಾಗಿದೆ.

- Advertisement -

Related news

error: Content is protected !!