- Advertisement -
- Advertisement -
ಬೆಂಗಳೂರು: ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ನೋಡೆಲ್ ಅಧಿಕಾರಿಯಾಗಿ (ಕೆಎಎಸ್) ಕೋವಿಡ್ 19 ಕರ್ತವ್ಯದಲ್ಲಿದ್ದ ಹೆಚ್.ಗಂಗಾಧರಯ್ಯ ಅವರು ಹೃದಯಾಘಾತದಿಂದ ಮರಣ ಹೊಂದಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 25 ಲಕ್ಷ ರೂ.ಗಳ ಪರಿಹಾರ, ಕುಟುಂಬದ ಒಬ್ಬರಿಗೆ ಸರ್ಕಾರಿ ಕೆಲಸ ಸೇರಿದಂತೆ ಪೋಲೀಸ್ ಗೌರವದೊಂದಿಗೆ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ದಕ್ಷ ಅಧಿಕಾರಿಯಾಗಿದ್ದ ಗಂಗಾಧರಯ್ಯ ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಸಂತಾಪದಲ್ಲಿ ತಿಳಿಸಿದ್ದಾರೆ.
- Advertisement -