- Advertisement -
- Advertisement -
ವರದಿ: ನ್ಯೂಸ್ ಡೆಸ್ಕ್, ವಿ ಟಿವಿ
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಶಾಸಕರಿಗೆ ಹಾಗೂ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಕಂಡುಬಂದ ಹಿನ್ನಲೆಯಲ್ಲಿ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ.ಸೀಲ್ ಡೌನ್ ಮಾಡಿದ ಬಳಿಕ ಹಳೆಯ ಹಾಗೂ ನೂತನ ಕಟ್ಟವನ್ನು ಬಿಬಿಎಂಪಿ ಸಿಬ್ಬಂದಿ ಸ್ಯಾನಿಟೈಸ್ ಮಾಡಿದ್ದಾರೆ. ಐವರು ಶಾಸಕರಿಗೆ ಹಾಗೂ ನಾಲ್ವರು ಸಿಬ್ಬಂದಿ ಸೇರಿ ಒಟ್ಟು 9 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಹಿನ್ನಲೆಯಲ್ಲಿ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ.

ಇನ್ನು ಕೊರೊನಾ ಕಾಣಿಸಿಕೊಂಡಿದ್ದರೂ ನಿನ್ನೆಯೂ ಕಚೇರಿಯಲ್ಲಿ ಕೆಲಸ ನಡೆದಿತ್ತು. ತಮ್ಮ ಕಚೇರಿಯಲ್ಲಿ ಕೊರೊನಾ ಬಂದಿದ್ದರೂ ಕಾಂಗ್ರೆಸ್ ನಾಯಕರು ತಲೆಕೆಡಿಸಿಕೊಂಡಿರಲಿಲ್ಲ ಎಂಬ ಮಾತುಗಳು ಕೇಳಿಬರ್ತಿವೆ.

- Advertisement -