- Advertisement -
- Advertisement -
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಇಂದು ಸರಣಿ ಸಭೆ ನಡೆಯಲಿದೆ. ಕೊರೊನಾ ವಿಚಾರದಲ್ಲಿ ಬಿಜೆಪಿ ವಿರುದ್ಧ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಚರ್ಚೆ ನಡೆಯಲಿದೆ ಎನ್ನಲಾಗಿದೆ.
ಇಂದು ಬೆಳಿಗ್ಗೆ 11 ಗಂಟೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆಯಲಿದೆ. ಕಾಂಗ್ರೆಸ್ ನ ಎಲ್ಲ ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ಮಾಡಿರುವ ಅವ್ಯವಹಾರದ ಬಗ್ಗೆ ಹೋರಾಟ ನಡೆಸಲು ಕಾಂಗ್ರೆಸ್ ನಾಯಕರ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ ಎಂದು ತಿಳಿದುಬಂದಿದೆ.
ಇನ್ನು ಮಧ್ಯಾಹ್ನ 3 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಮತ್ತೊಂದು ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಸಭೆಯಲ್ಲಿ ಹಾಲಿ, ಮಾಜಿ ಶಾಸಕರು, ಪರಿಷತ್ ಸದಸ್ಯರು ಭಾಗಿಯಾಗಲಿದ್ದಾರೆ ಎನ್ನಲಾಗಿದೆ. ಕೊರೊನಾ ವಿಚಾರದಲ್ಲಿ ನಡೆದಿದೆ ಎನ್ನಲಾದ ಹಗರಣದ ವಿರುದ್ಧ ಕ್ಷೇತ್ರವಾರು ಧರಣಿ ನಡೆಸುವ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗಿದೆ.
- Advertisement -