- Advertisement -
- Advertisement -


ಬೆಂಗಳೂರು: ಕೆಪಿಎಸ್‌ಸಿ ನೇಮಕಾತಿಯಲ್ಲಿ ಹಗರಣ ಪ್ರಕರಣ ಸಂಬಂಧ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ವಿಚಾರಣೆ ಸಂಬಂಧ ಗ್ಯಾನೇಂದ್ರನನ್ನು 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿತ್ತು. 14 ದಿನಗಳ ಬಳಿಕ ಇಂದು ಗ್ಯಾನೇಂದ್ರನನ್ನು ಇಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಈ ಹಿನ್ನೆಲೆ ಇಡಿ ಅಧಿಕಾರಿಗಳು ಗ್ಯಾನೇಂದ್ರನನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.
- Advertisement -








