Tuesday, May 21, 2024
spot_imgspot_img
spot_imgspot_img

ಕೆಎಸ್​​ ಈಶ್ವರಪ್ಪ ಪುತ್ರನಿಗೂ ಅಶ್ಲೀಲ ಸಿಡಿ ಭೀತಿ : ಅಶ್ಲೀಲ ವಿಡಿಯೊ ಪ್ರಸಾರಕ್ಕೆ ಕೋರ್ಟ್ ನಿಂದ ಸ್ಟೇ ತಂದ​ ಕಾಂತೇಶ್​

- Advertisement -G L Acharya panikkar
- Advertisement -
This image has an empty alt attribute; its file name is VC_PUC_-1-819x1024.jpg

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಆಗಿದ್ದು, ಈ ಸಂಬಂಧ ರಾಜ್ಯ ಸರ್ಕಾರ ಎಸ್‌ಐಟಿ ತನಿಖೆಗೂ ಆದೇಶಿಸಿದೆ. ಇದರ ಬೆನ್ನಲ್ಲೇ ಇದೀಗ ಮಾಜಿ ಸಚಿವ, ಹಿರಿಯ ರಾಜಕಾರಣಿ ಕೆಎಸ್ ಈಶ್ವರಪ್ಪ ಪುತ್ರ ಕಾಂತೇಶ್​ಗೂ ಸಹ ಅಶ್ಲೀಲ ಸಿಡಿ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕಾಂತೇಶ್, ಮಾಧ್ಯಮಗಳಿಗೆ ನಿರ್ಬಂಧ ಕೋರಿ ನ್ಯಾಯಾಲಕ್ಕೆ ಅರ್ಜಿ ಸಲ್ಲಿಸಿದ್ದು, ಯಾವುದೇ ಮಾನಹಾನಿಕರ ದೃಶ್ಯ ಪ್ರಸಾರ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಮಧ್ಯಂತರ ನಿರ್ಬಂಧಕಾಜ್ಞೆ ಹೊರಡಿಸಿದೆ.

ಲೋಕಸಭೆ ಚುನಾವಣೆ ವೇಳೆ ತಮ್ಮ ಹೆಸರಿಗೆ ಮಸಿ ಬಳಿಯುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತ ಕ್ರಮವಾಗಿ ಕಾಂತೇಶ್​ ಅವರು ಮಾಧ್ಯಮಗಳಲ್ಲಿ ಮಾನಹಾನಿಕರ ದೃಶ್ಯ ಪ್ರಸಾರಕ್ಕೆ ನಿರ್ಬಂಧ ಕೋರಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಪರಿಗಣಿಸಿದ ಕೋರ್ಟ್, ಯಾವುದೇ ಮಾನಹಾನಿಕರ ದೃಶ್ಯ ಪ್ರಸಾರ ಮಾಡದಂತೆ ನಿರ್ಬಂಧಕಾಜ್ಞೆ ಹೊರಡಿಸಿದೆ.

- Advertisement -

Related news

error: Content is protected !!