Saturday, June 28, 2025
spot_imgspot_img
spot_imgspot_img

ಕ್ಷೀರ ಭಾಗ್ಯ ಯೋಜನೆಯ ಹಾಲಿನ ಪುಡಿ ಅಕ್ರಮ ಸಾಗಾಟ; ಇಬ್ಬರು ಆರೋಪಿಗಳ ಬಂಧನ..!

- Advertisement -
- Advertisement -

ಗದಗ: ಸರ್ಕಾರದ ಕ್ಷೀರ ಭಾಗ್ಯ ಯೋಜನೆಯ ಹಾಲಿನ ಪುಡಿಯನ್ನು ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಟಗೇರಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಸಂತೋಷ ಶಿಂಧೆ ಮತ್ತು ಖಾಜಾ ಹುಸೇನ್ ಎಂದು ಗುರುತಿಸಲಾಗಿದೆ.

ಬೆಟಗೇರಿ ಪೊಲೀಸ್ ಠಾಣೆಯ ಪೋಲೀಸ್ ಸಿಬ್ಬಂದಿ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ಜಂಟಿ ಕಾರ್ಯಾಚರಣೆಯಲ್ಲಿ, ಇಬ್ಬರನ್ನು ಬಂಧಿಸಿ 1 ಲಕ್ಷ 12 ಸಾವಿರ ಮೌಲ್ಯದ 313 ಕೆಜಿ ಹಾಲಿನ ಪುಡಿಯನ್ನು ವಶಕ್ಕೆ ಪಡೆಯಲಾಗಿದೆ.

ಬಂಧಿತ ಆರೋಪಿಗಳಿಂದ ಹಾಲಿನ ಪುಡಿ ಹಾಗೂ ಮಿನಿ ಲಾರಿ ವಶಪಡಿಸಿಕೊಂಡು ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕ್ಷೀರ ಭಾಗ್ಯ ಯೋಜನೆಯ ಹಾಲಿನ ಪುಡಿ ಮಕ್ಕಳು ಮತ್ತು ವಿದ್ಯಾರ್ಥಿಗಳ ಪೋಷಕ ಆಹಾರವಾಗಿ ಬಳಕೆಯಾಗಬೇಕಿದ್ದರೆ, ಅದನ್ನು ದುರುಪಯೋಗಪಡಿಸಿಕೊಳ್ಳಲು ಯತ್ನಿಸಿದ ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

- Advertisement -

Related news

error: Content is protected !!