Monday, June 15, 2026
spot_imgspot_img
spot_imgspot_img

ಬೈಕ್ ಸವಾರನನ್ನು ರಕ್ಷಿಸಲು ಹೋಗಿ ಫೈಓವರ್ ಗೆ ಡಿಕ್ಕಿ ಹೊಡೆದ ಕೆಎಸ್‌ಆರ್ ಟಿಸಿ ಬಸ್..!

- Advertisement -
- Advertisement -

ಬೈಕ್ ಸವಾರನನ್ನು ರಕ್ಷಿಸಲು ಹೋಗಿ ಕೆಎಸ್‌ಆರ್ ಟಿಸಿ ಬಸ್ಸೊಂದು ಫೈಓವರ್ ಗೆ ಡಿಕ್ಕಿ ಹೊಡೆದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರು ಸಮೀಪ ನಡೆದಿದೆ.

ಬಸ್ ಬೆಂಗಳೂರಿನಿಂದ ಸೋಮವಾರಪೇಟೆಗೆ ತೆರಳುತಿದ್ದ ವೇಳೆ ಬೈಕ್ ಸವಾರನೊಬ್ಬ ಅಡ್ಡ ಬಂದಿದ್ದಾನೆ. ಇದನ್ನು ಗಮನಿಸಿದ ಬಸ್ ಚಾಲಕ ಆತನನ್ನು ರಕ್ಷಿಸುವ ಸಲುವಾಗಿ ಹೋಗಿ ಅವಘಡಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ಪ್ರೈಓವರ್ ತಡೆಗೋಡೆಗೆ ಡಿಕ್ಕಿ ಹೊಡೆದು ನಿಂತಿದೆ. ಸಲ್ಪ ಯಾಮಾರಿದರೂ ಭಾರೀ ಅನಾಹುತ ಸಂಭವಿಸುತ್ತಿತ್ತು. ಆದರೆ ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ದುರಂತವೊಂದು ತಪ್ಪಿದಂತಾಗಿದೆ. ಬಸ್ ನಲ್ಲಿದ್ದ ನಾಲ್ಕು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!