Sunday, June 29, 2025
spot_imgspot_img
spot_imgspot_img

ದ್ವಿಚಕ್ರ ವಾಹನಕ್ಕೆ KSRTC ಬಸ್ ಡಿಕ್ಕಿ : ಸವಾರ ಸ್ಥಳದಲ್ಲೇ ಮೃತ್ಯು

- Advertisement -
- Advertisement -

ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಕೊಡಗದಾಲ ಗ್ರಾಮದ‌ ಬಳಿ ನಡೆದಿದೆ.

ಮೃತ ದುರ್ದೈವಿ ನಿಟ್ರಹಳ್ಳಿ ನಿವಾಸಿ ಲೋಕೇಶ್ (45) ಎಂದು ಗುರುತಿಸಲಾಗಿದೆ.

ಚಿಂತಾಮಣಿ ಯಿಂದ ಹಾವೇರಿಗೆ ತೆರಳುತ್ತಿದ್ದ ವಾಯುವ್ಯ ಕರ್ನಾಟಕ ಸಾರಿಗೆ ಎದುರಿಗೆ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ. ಬಸ್ ಹಾಗೂ ದ್ವಿ ಚಕ್ರವಾಹನದ ನಡುವೆ ಡಿಕ್ಕಿ ಸಂಭವಿಸಿದ ನಂತರ ಬಸ್ ಬಲಗಡೆ ರಸ್ತೆ ಬದಿಯ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಅದೃಷ್ಟವಷಾತ್ ಬಸ್ ಪ್ರಯಾಣಿಕರು ಯಾವುದೇ ಪ್ರಾಣಪಾಯವಿಲ್ಲದೆ ಪಾರಾಗಿದ್ದಾರೆ.

ಸ್ಥಳಕ್ಕೆ ಮಧುಗಿರಿ ಪೊಲೀಸ್ ಠಾಣೆ ವೃತ್ತ ನಿರೀಕ್ಷಕ ಹನುಮಂತರಾಯಪ್ಪ, ಕೊಡಿಗೇನಹಳ್ಳಿ ಪೊಲೀಸ್ ಠಾಣಾ ಪಿಎಸ್ಐ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿ ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದ್ದಾರೆ

- Advertisement -

Related news

error: Content is protected !!