Sunday, May 5, 2024
spot_imgspot_img
spot_imgspot_img

ಕೆಎಸ್ ಆರ್ ಟಿಸಿ, ಬಿಎಂಟಿಸಿ ಬಸ್‌ಗಳಲ್ಲಿ 10 ರೂ. ನಾಣ್ಯವನ್ನು ತೆಗೆದುಕೊಳ್ಳಬೇಕು- ಸಾರಿಗೆ ಇಲಾಖೆ ಆದೇಶ

- Advertisement -G L Acharya panikkar
- Advertisement -

ರಾಜ್ಯದ ಬಸ್‌ ಕಂಡಕ್ಟರ್‌ಗಳಿಗೆ ಸಾರಿಗೆ ಇಲಾಖೆ ಸೂಚನೆಯೊಂದನ್ನು ನೀಡಿದೆ. ಕೆಎಸ್ ಆರ್ ಟಿಸಿ, ಬಿಎಂಟಿಸಿ ಬಸ್‌ಗಳಲ್ಲಿ 10 ರೂ. ನಾಣ್ಯವನ್ನು ಕಂಡಕ್ಟರ್‍ ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಿದೆ. ನಾಣ್ಯ ಕೊಟ್ಟಾಗ ಇದು ಹೋಗಲ್ಲ ನೋಟು ಕೊಡಿ ಎಂದು ಹೇಳುತ್ತಿದ್ದರು. ಹೀಗಾಗಿ 10 ರೂಪಾಯಿ ನಾಣ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಿದ ಹಿನ್ನೆಲೆಯಲ್ಲಿ ತಿಳುವಳಿಕೆ ಪತ್ರದ ಮೂಲಕ ಸಾರಿಗೆ ಇಲಾಖೆಯ ಕಾರ್ಯದರ್ಶಿಯು ಎಲ್ಲಾ ನಿಗಮಗಳಿಗೂ ಸೂಚನೆ ಮಾಡಿದ್ದಾರೆ.

ಕೆಎಸ್ ಆರ್ ಟಿಸಿ, ಬಿಎಂಟಿಸಿ, ವಾಯುವ್ಯ ಸಾರಿಗೆ ಹಾಗೂ ಈಶಾನ್ಯ ಸಾರಿಗೆ ನಿಗಮಕ್ಕೆ ಸಾರಿಗೆ ಇಲಾಖೆಯಿಂದ ಪತ್ರ ಬರೆಯಲಾಗಿದ್ದು, ಅದರಲ್ಲಿ ರಾಜ್ಯದ ಎಲ್ಲಾ ಸಾರಿಗೆ ಬಸ್ ಗಳಲ್ಲೂ 10 ರೂ. ನಾಣ್ಯ ಪಡೆಯುವಂತೆ ಆದೇಶಿಸಲಾಗಿದೆ. ಬಸ್ ಪ್ರಯಾಣದ ವೇಳೆ ಪ್ರಯಾಣಿಕರು 10 ರೂ. ನಾಣ್ಯ ನೀಡಿದರೆ ಪಡೆಯಬೇಕು. ಒಂದು ವೇಳೆ 10 ರೂ. ನಾಣ್ಯ ಪಡೆಯದೇ ಇದ್ದರೆ, ಈ ಬಗ್ಗೆ ಪ್ರಯಾಣಿಕರಿಂದ ದೂರು ಬಂದರೆ ಆ ಬಸ್ಸಿನ ನಿರ್ವಾಹಕರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವುದಾಗಿ ಇಲಾಖೆ ಎಚ್ಚರಿಕೆ ರವಾನಿಸಿದೆ.

- Advertisement -

Related news

error: Content is protected !!