Saturday, June 13, 2026
spot_imgspot_img
spot_imgspot_img

ಅಡ್ಕಸ್ಥಳ: ನಿಲ್ಲಿಸಿದ್ದ ಪಿಕಪ್‌ ವಾಹನಕ್ಕೆ ಕೆಎಸ್‌ಆರ್‌ಟಿಸಿ ಬಸ್ಸು ಡಿಕ್ಕಿ; ಪಿಕಪ್‌ ಚಾಲಕ ಮೃತ್ಯು, ಇನ್ನೋರ್ವ ಗಂಭೀರ..!

- Advertisement -
- Advertisement -

ಅಡ್ಕಸ್ಥಳ: ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಪಿಕಪ್‌ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಪಿಕಪ್‌ ಚಾಲಕ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಅಡ್ಕಸ್ಥಳದ ಗಡಿಭಾಗದಲ್ಲಿ ನಡೆದಿದೆ.

ಅಪಘಾತದಲ್ಲಿ ಪಿಕಪ್‌ ಚಾಲಕ ಮಣಿಯಂಪಾರೆ ನಿವಾಸಿ ಮುಸ್ತಾಫ ಪಿ.ಎ. ಪಜ್ಜಾನ (38) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಪಿಕಪ್‌ ವಾಹನದಲ್ಲಿದ್ದ ಶೇಣಿ ನಿವಾಸಿ ರಾಮಚಂದ್ರ ಗಂಭೀರ ಗಾಯಗೊಂಡವರು. ಗಾಯಾಳುವನ್ನು ಚಿಕಿತ್ಸೆಗಾಗಿ ಕೇರಳದ ಆಸ್ಪತ್ರೆಗೆ ದಾಖಲಿಸಲಾಗಿದೆ.

This image has an empty alt attribute; its file name is adkasthala-acdnt-2.jpg

ಎದುರಿನಿಂದ ಬಂದ ಕಾರೊಂದನ್ನು ತಪ್ಪಿಸುವ ಭರದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಅಡಿಕೆ ಸಸಿ ಸಾಗಾಟದ ಪಿಕಪ್‌ಗೆ ಡಿಕ್ಕಿಯಾಗಿದೆ. ತಲೆಗೆ ತೀವ್ರ ಗಾಯಗೊಂಡಿದ್ದ ಮುಸ್ತಫಾರನ್ನು ವಿಟ್ಲ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಸಾವನ್ನಪ್ಪಿದ್ದಾರೆ.

ವಾಹನದಲ್ಲಿದ್ದ ಇನ್ನೋರ್ವ ಕೆಲಸಗಾರ ಗಂಭೀರ ಗಾಯಗೊಂಡಿದ್ದು ಚಿಕಿತ್ಸೆಗಾಗಿ ವಿಟ್ಲ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗಾಗಿ ಕಾಸರಗೋಡು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!