Sunday, July 6, 2025
spot_imgspot_img
spot_imgspot_img

ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ ಗಾಂಜಾ ಮಾರಾಟ; ಇಬ್ಬರು ಬಿಎಂಟಿಸಿ ಸಿಬ್ಬಂದಿಗಳು ಅರೆಸ್ಟ್

- Advertisement -
- Advertisement -

ಬೆಂಗಳೂರು: ಕೆಎಸ್ಆರ್​ಟಿಸಿ ಬಸ್ಸುಗಳಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಆರೋಪದಡಿ ಬಿಎಂಟಿಸಿ ಬಸ್ ಚಾಲಕ, ನಿರ್ವಾಹಕರನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.

ವಿಠ್ಠಲ್ ಭಜಂತ್ರಿ ಮತ್ತು ಶರಣ ಬಸಪ್ಪ ಎಂಬುವವರೇ ಬಂಧಿತರು. ಬಂಧಿತರಿಂದ 9.800 ಕೆಜಿ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಕಳೆದ ಮೂರು ವರ್ಷಗಳಿಂದ ಕೆಂಗೇರಿ ಬಳಿಯ ತುರಹಳ್ಳಿ ಅರಣ್ಯ ಪ್ರದೇಶದಲ್ಲಿಯೂ ಗಾಂಜಾ ಮಾರಾಟ ಮಾಡುತ್ತಿದ್ದರು. ಬಂಧಿತರು ವಿಜಯಪುರ, ಕಲಬುರಗಿಯಿಂದ ಗಾಂಜಾ ತಂದು ಮಾರುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಬಿಎಂಟಿಸಿ ಯಲ್ಲಿ ಚಾಲಕ ಮತ್ತು ನಿರ್ವಾಹಕರಾಗಿ ಕೆಲಸ ಮಾಡ್ತಿದ್ದ ಆರೋಪಿಗಳು. ಸರ್ಕಾರಿ ಬಸ್ ಗಳಲ್ಲಿ ಮುಕ್ತ ಓಡಾಟಕ್ಕೆ ಅವಕಾಶವನ್ನು ಬಂಧಿತರು ದುರ್ಬಳಕೆ ಮಾಡಿ‌ ಗಾಂಜಾ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಕೆಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

- Advertisement -

Related news

error: Content is protected !!