Monday, November 16, 2026
spot_imgspot_img
spot_imgspot_img

ಮದುವೆ ಮುಗಿಸಿ ಹೋಗುವಾಗ ಬೈಕಿಗೆ KSRTC ಬಸ್ ಡಿಕ್ಕಿ – ಇಬ್ಬರು ಯುವಕರು ಸಾವು

- Advertisement -
- Advertisement -

ತುಮಕೂರು: ಮದುವೆ ಮುಗಿಸಿ ವಾಪಸ್ ಹೋಗುತ್ತಿದ್ದ ವೇಳೆ ಬೈಕಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಮಾದಿಹಳ್ಳಿ ಬಳಿ ನಡೆದಿದೆ.

ತಿಪಟೂರು-ಅರಸೀಕೆರೆ ರಸ್ತೆಯ ಮಾದಿಹಳ್ಳಿ ಬಳಿ ಈ ಅಪಘಾತ ನಡೆದಿದೆ. ಮೃತ ದುರ್ದೈವಿಗಳನ್ನು ಗೆದ್ದಲೆಹಳ್ಳಿ ನಿವಾಸಿ ದಿನೇಶ್ ಪುತ್ರ ಸಂಜು (23) ಹಾಗೂ ಬೈರನಾಯಕನಹಳ್ಳಿ ಗ್ರಾಮದ ಆನಂದ್ ಕುಮಾರ್ ಪುತ್ರ ಹರ್ಷ (23) ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ, ಸಂಬಂಧಿಕರ ಮದುವೆ ಮುಗಿಸಿ ಬೈಕ್‌ನಲ್ಲಿ ವಾಪಸ್ ಬರುತ್ತಿದ್ದ ಯುವಕರು ಮಾದಿಹಳ್ಳಿ ಬಳಿ ಯೂ-ಟರ್ನ್ ತೆಗೆದುಕೊಳ್ಳುವಾಗ ಅರಸೀಕೆರೆ ಕಡೆಯಿಂದ ತಿಪಟೂರಿಗೆ ಬರುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ.

ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಿಪಟೂರು ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!