Saturday, June 28, 2025
spot_imgspot_img
spot_imgspot_img

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್‌.ಟಿ.ಸಿ.ಬಸ್ ಪಲ್ಟಿ : ಹಲವರಿಗೆ ಗಾಯ

- Advertisement -
- Advertisement -

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್‌.ಟಿ.ಸಿ.ಬಸ್ ಪಲ್ಟಿಯಾದ ಘಟನೆ ವಗ್ಗ ಸಮೀಪದ ಕೊಪ್ಪಳ ಎಂಬಲ್ಲಿ ನಡೆದಿದೆ.

ಧರ್ಮಸ್ಥಳದ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುವ ಕೆ.ಎಸ್.ಆರ್.ಟಿ.ಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬಿದ್ದಿದೆ.

ಘಟನೆಯಲ್ಲಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ, ಸ್ಥಳೀಯ ಯುವಕರು ಬಸ್ಸಿನಿಂದ ಪ್ರಯಾಣಿಕರನ್ನು ಹೊರಗೆ ತೆಗೆಯಲು ಸಹಕರಿಸಿದ್ದಾರೆ. ಮಂಗಳೂರು ವಿಭಾಗಕ್ಕೆ ಸೇರಿದ ಬಸ್ಸು ಅದಾಗಿದ್ದು, ಪಲ್ಟಿಯಾಗುವುದಕ್ಕೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಬಂಟ್ವಾಳ ಸಂಚಾರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

- Advertisement -

Related news

error: Content is protected !!