- Advertisement -
- Advertisement -
ಚಿತ್ರದುರ್ಗ: KSRTC ಬಸ್ ಪಲ್ಟಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ.
50 ಪ್ರಯಾಣಿಕರನ್ನು ಹೊತ್ತು ಬೆಂಗಳೂರು ಕಡೆಗೆ ಸಾಗುತ್ತಿದ್ದ KSRTC ಬಸ್ ಹಿರಿಯೂರು ನಗರದ ಶಿವಮೂರ್ತಿ ಬಡಾವಣೆ ಬಳಿ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಬಸ್ ಪಲ್ಟಿ ಆಗುತ್ತಿದ್ದಂತೆ ಗಾಯಾಳುಗಳು ಹಾಗೂ ಮೃತರನ್ನು ರಸ್ತೆಯಲ್ಲಿ ಬಿಟ್ಟು ಚಾಲಕ ಹಾಗೂ ಕಂಡಕ್ಟರ್ ಪರಾರಿಯಾಗಿದ್ದಾರೆ. ಚಾಲಕನ ಅಜಾಗರೂಕತೆ ಹಾಗೂ ಅತೀ ವೇಗದ ಚಾಲನೆಯೇ ಅವಘಡಕ್ಕೆ ಕಾರಣ ಎನ್ನಲಾಗಿದೆ.
ಗಂಭೀರವಾಗಿ ಗಾಯಗೊಂಡ ಪ್ರಯಾಣಿಕರನ್ನ ಹಿರಿಯೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗ್ತಿದೆ. ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -