Monday, June 8, 2026
spot_imgspot_img
spot_imgspot_img

ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಆಲ್ಟೋ ಕಾರು ನಡುವೆ ಮುಖಾಮುಖಿ ಢಿಕ್ಕಿ- ಮೂವರು ಮಕ್ಕಳು ಸೇರಿದಂತೆ ಐವರು ಗಂಭೀರ

- Advertisement -
- Advertisement -

ನೆಲ್ಯಾಡಿ: ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಆಲ್ಟೋ ಕಾರು ನಡುವೆ ಮುಖಾಮುಖಿ ಢಿಕ್ಕಿಯಾದ ಘಟನೆ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ನಡೆದಿದೆ.

ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಡ್ಡಹೊಳೆ ಸಮೀಪ ಈ ಘಟನೆ ನಡೆದಿದ್ದು ಕಾರಿನಲ್ಲಿದ್ದ ಮೂವರು ಮಕ್ಕಳು ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.


ಕೊಕ್ಕಡದ ಪಟ್ರಮೆಯ ನಿವಾಸಿಗಳು ಆಲ್ಟೋ ಕಾರಿನಲ್ಲಿದ್ದರು.ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಢಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!