- Advertisement -
- Advertisement -
ವರದಿ: ನ್ಯೂಸ್ ಡೆಸ್ಕ್, ವಿ ಟಿವಿ
ರಾಜ್ಯದಲ್ಲಿ ಕೊರೊನಾ ವೈರಸ್ ದಿನಂದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಬಸ್ ಗಳಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆ ತೀರ ವಿರಳವಾಗಿದೆ. ಹೀಗಾಗಿ ಸಾರಿಗೆ ಸಂಸ್ಥೆಗೆ ಆದಾಯವಿಲ್ಲದಂತಾಗಿದೆ.ಈ ಕಾರಣಕ್ಕೆ ಸಾರಿಗೆ ಸಿಬ್ಬಂದಿಗೆ ಸಂಬಳ, ಭತ್ಯೆ ಇಲ್ಲದೆ ಒಂದು ವರ್ಷ ರಜೆ ನೀಡಲು ಸಾರಿಗೆ ಇಲಾಖೆ ಚಿಂತನೆ ನಡೆಸಿದೆ.
ಈ ಸಂಬಂಧ ವಾಯುವ್ಯ, ಈಶಾನ್ಯ, ಬಿಎಂಟಿಸಿ ಆಡಳಿತ ನಿರ್ದೇಶಕರು ತಮ್ಮ ಅಭಿಪ್ರಾಯ ತಿಳಿಸುವಂತೆ ಕೆಎಸ್ ಆರ್ ಟಿಸಿ ಎಂಡಿ ಪತ್ರ ಬರೆದಿದ್ದಾರೆ. ಸಾರಿಗೆ ಸಂಸ್ಥೆಗಳ ಆರ್ಥಿಕತೆ ಸಂಪೂರ್ಣ ಕುಸಿದಿದೆ. ಸಿಬ್ಬಂದಿ ಆರೋಗ್ಯ ದೃಷ್ಟಿಯಿಂದ ಕೂಡ ಈ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
- Advertisement -