Friday, April 26, 2024
spot_imgspot_img
spot_imgspot_img

ಇಂದಿನಿಂದ ಖಾಸಗಿ ಬಸ್’ಗಳನ್ನು ಓಡಿಸಲು ಸರ್ಕಾರ ತೀರ್ಮಾನ

- Advertisement -G L Acharya panikkar
- Advertisement -

ಬೆಂಗಳೂರು: ಮುಷ್ಕರನಿರತ ಸಾರಿಗೆ ಸಂಸ್ಥೆ ನೌಕರರನ್ನು ಮಾತುಕತೆಗೆ ಆಹ್ವಾನಿಸಿರುವ ಬೆನ್ನಲ್ಲೇ ಪರ್ಯಾಯ ವ್ಯವಸ್ಥೆಯಾಗಿ ಇಂದಿನಿಂದ ಖಾಸಗಿ ಬಸ್’ಗಳನ್ನು ಓಡಿಸಲು ಸರ್ಕಾರ ತೀರ್ಮಾನಿಸಿದೆ.


ಜನರಿಗೆ ಅನಾನುಕೂಲವಾಗಬಾರದು ಎಂಬ ಕಾರಣಕ್ಕೆ ಸರ್ಕಾರಿ ಬಸ್ ಪ್ರಯಾಣ ದರದಲ್ಲೇ ಖಾಸಗಿ ಬಸ್ ಗಳನ್ನು ಸಂಚಾರಕ್ಕೆ ಬಳಸಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.
ನನಾಉ ಬೆಂಗಳೂರಿನ ಸರ್ಕಾರಿ ನಿವಾಸದಲ್ಲೇ ಇದ್ದೇನೆ. ರಾತ್ರಿ 12ರವರೆಗೂ ನಾನು ಲಭ್ಯನಿದ್ದೇನೆ. ಮಾತುಕತೆಗೆ ಬನ್ನಿ ಎಂದು ಮುಷ್ಕರನಿರತ ಸಾರಿಗೆ ನೌಕರರಿಗೆ ಆಹ್ವಾನ ನೀಡಿದ್ದಾರೆ. ನಿಮ್ಮ ಸಮಸ್ಯೆಗಳನ್ನು ಸಹಾನುಭೂತಿಯಿಂದ ಆಲಿಸಲಾಗುವುದು ಎಂದಿದ್ದಾರೆ.


ಈ ಮಧ್ಯೆ, ಹೋರಾಟದ ನೇತೃತ್ವ ವಹಿಸಿರುವ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ ಅವರ ವಿರುದ್ಧ ಸಿಎಂ ಬಿ.ಎಸ್.ಯಡಿಯೂರಪ್ಪ ಕಿಡಿಕಾರಿದ್ದು, ಮುಷ್ಕರಕ್ಕೆ ಕೋಡಿಹಳ್ಳಿ ಅವರೇ ಪ್ರೇರಣೆ ನೀಡುತ್ತಿದ್ದಾರೆ ಎಂದು ದೂರಿದ್ದಾರೆ. ಮುಷ್ಕರ ನಿಲ್ಲಿಸಿದರೆ‌ ಮಾತ್ರ ಚರ್ಚೆ ಎಂದು ಸಿಎಂ ಹೇಳಿದ್ದಾರೆ.


ಕೊರೋನಾ ಸಂದರ್ಭದಲ್ಲಿ ಬೇಡಿಕೆ ಈಡೇರಿಕೆ ಕಷ್ಟ ಎಂದಿರುವ ಗೃಹಸಚಿವ ಬಸವರಾಜ ಬೊಮ್ಮಾಯಿ, ಮುಷ್ಕರನಿರತ ಸಾರಿಗೆ ನೌಕರರ ವಿರುದ್ಧ ಎಸ್ಮಾ ಹೇರುವ ಸ್ಥಿತಿ ಇನ್ನೂ ಉದ್ಭವಿಸಿಲ್ಲ. ಹಾಗೇನಾದರೂ ಆದರೆ ಎಸ್ಮಾ ಹೇರಲೂ ಸರ್ಕಾರ ಹಿಂದೇಟು ಹಾಕುವುದಿಲ್ಲ. ಎಸ್ಮಾ ಜಾರಿಯಾದರೆ ನೌಕರರ ವೇತನ ಕಡಿತವಾಗಲಿದೆ ಎಂದು ಹೇಳಿದ್ದಾರೆ.

- Advertisement -

Related news

error: Content is protected !!