Tuesday, June 9, 2026
spot_imgspot_img
spot_imgspot_img

ಕುದ್ರೋಳಿ: ಮನೆಯಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ನದಿಯಲ್ಲಿ ಪತ್ತೆ!

- Advertisement -
- Advertisement -

ಮಂಗಳೂರು: ಇಲ್ಲಿನ ಕುದ್ರೋಳಿಯ ಹೈದರಾಲಿ ರಸ್ತೆಯಲ್ಲಿನ ಮನೆಯಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹವು ಮನೆ ಸಮೀಪದ ನದಿಯಲ್ಲಿ ಮಧ್ಯಾಹ್ನದ ವೇಳೆಗೆ ಪತ್ತೆಯಾಗಿದೆ.

ಮೃತ ಬಾಲಕಿ ಕುದ್ರೋಳಿಯ ಹೈದರಾಲಿ ರಸ್ತೆಯ ನಿವಾಸಿ ಸಲಾಂ ಎಂಬವರ ಮಗಳು ಮುಫೀದಾ(11) ಎನ್ನಲಾಗಿದೆ.

ಈಕೆ ಭಾನುವಾರ ಬೆಳಗ್ಗೆ ಮನೆಯಿಂದ ಕಾಣೆಯಾಗಿದ್ದಳು. ತಕ್ಷಣವೇ ಎಲ್ಲಾ ಕಡೆ ಹುಡುಕಾಟ ನಡೆಸಿದ್ದರೂ ಪ್ರಯೋಜನವಾಗಲಿಲ್ಲ. ಮನೆ ಸಮೀಪದ ಅಂಗಡಿಯೊಂದರ ಸಿಸಿಟಿವಿ ಕ್ಯಾಮರಾ ಪರಿಶೀಲಿಸಿದಾಗ ಮನೆಯಿಂದ ಸುಮಾರು 200 ಮೀ. ದೂರದಲ್ಲಿರುವ ನದಿ ಕಡೆಗೆ ಬಾಲಕಿ ತೆರಳುತ್ತಿರುವುದು ಕಂಡುಬಂದಿದೆ.

ಅದರಂತೆ ಸ್ಥಳೀಯರು ಕುದ್ರೋಳಿಯ ಕಾರ್ಖಾನೆ ಬಳಿಯ ನದಿಯಲ್ಲಿ ಶೋಧ ನಡೆಸಿದಾಗ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಬಾಲಕಿಗೆ ಅಲ್ಪ ಪ್ರಮಾಣದಲ್ಲಿ ಬುದ್ಧಿಮಾಂದ್ಯತೆ ಸಮಸ್ಯೆಯಿದ್ದು, ಮನೆಯವರು ಕೆಲಸದಲ್ಲಿದ್ದಾಗ ಈಕೆ ಮನೆಯಿಂದ ಹೊರಬಂದಿದ್ದಾಳೆ ಎನ್ನಲಾಗಿದೆ. ಈ ಬಗ್ಗೆ ಬಂದರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!