Thursday, March 28, 2024
spot_imgspot_img
spot_imgspot_img

ಮಂಗಳೂರು: ಕುಕ್ಕೆ, ಧರ್ಮಸ್ಥಳದಲ್ಲಿ ಸೇವೆಗಳು ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿ ಸೂಚನೆ

- Advertisement -G L Acharya panikkar
- Advertisement -

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕೇಂದ್ರಗಳಾದ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳ ಮಂಜುನಾಥ ಸನ್ನಿಧಿಯಲ್ಲಿ ಮುಂದಿನ ಆದೇಶದವರೆಗೆ ಸೇವೆಗಳನ್ನು ಸ್ಥಗಿತಗೊಳಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ. ವಿ. ರಾಜೇಂದ್ರ ಅವರು ಈ ಆದೇಶ ಹೊರಡಿಸಿದ್ದು, ನೆರೆಯ ಕೇರಳ ರಾಜ್ಯದಲ್ಲಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕೋವಿಡ್ ಪ್ರಕರಣ ಹೆಚ್ಚಳ ಕಂಡುಬರುತ್ತಿದೆ. ಹೊರ ಜಿಲ್ಲೆ, ರಾಜ್ಯದವರು ಇಲ್ಲಿಗೆ ತೀರ್ಥಯಾತ್ರೆ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಆಗಸ್ಟ್ 4 ರಿಂದ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳದಲ್ಲಿ ಸೇವೆಗಳನ್ನು ಸ್ಥಗಿತ ಮಾಡಲು ಸೂಚನೆ ನೀಡಲಾಗಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

- Advertisement -

Related news

error: Content is protected !!