ಸುಬ್ರಹ್ಮಣ್ಯ:-ದ.ಕ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ,ಪತ್ನಿ ಸಮೇತರಾಗಿ ಭೇಟಿ ನೀಡಿ ,ಸುಬ್ರಹ್ಮಣ್ಯ ಸ್ವಾಮಿಗೆ ಪೂಜೆ ಸಲ್ಲಿಸಿ, ಪ್ರಾರ್ಥನೆ ಸಲ್ಲಿಸಿದರು. ಎಸ್ಸೆಸ್ಸೆಲ್ಸಿ ಪರೀಕ್ಷೆ ನಿರ್ವಿಘ್ನವಾಗಿ ನಡೆದ ಹಿನ್ನೆಲೆ ಪೂಜೆ ಸಲ್ಲಿಕೆ ಮಾಡಲಾಗಿದೆ ಎಂದು ತಿಳಿಸಿದರು.ಅವರು ದೇವರ ದರ್ಶನ ಪಡೆದ ನಂತರ ಮಾಧ್ಯಮ ಮಿತ್ರರ ಪ್ರಶ್ನೆಗೆ ಉತ್ತರಿಸುತ್ತ , ಮಕ್ಕಳ ಆರೋಗ್ಯ ಕಾಳಜಿ ಮತ್ತು ಪೋಷಕರ ಹಿತವನ್ನು ಗಮನದಲ್ಲಿ ಇಟ್ಟುಕೊಂಡು ಶಾಲಾ ಆರಂಭದ ಕುರಿತಂತೆ ಅಧಿಕೃವಾಗಿ ತಿಳಿಸಲಾಗುವುದು.
ರಾಜ್ಯದಲ್ಲಿ ಕೊರೋನಾ ಆರ್ಭಟ ಹೆಚ್ಚಾಗಿದ್ದು ಸಹಜ ಸ್ಥಿತಿಗೆ ಬರುವವರೆಗೆ ಸರ್ಕಾರ ಶಾಲಾ ಆರಂಭ ಮಾಡುವುದಿಲ್ಲ ಎಂದರು. ಆನ್‌ಲೈನ್ ಶಿಕ್ಷಣದ ಕುರಿತು ಮಾಧ್ಯಮ ಮಿತ್ರರ ಪ್ರಶ್ನೆಗೆ ಉತ್ತರಿಸಿದ ಸಚಿವರು ಆನ್ ಲೈನ್ ಶಿಕ್ಷಣಕ್ಕೆ ನಮ್ಮ ರಾಜ್ಯದಲ್ಲಿ ಹಲವಾರು ಕಡೆಗಳಲ್ಲಿ ಅದರಲ್ಲೂ ಗ್ರಾಮೀಣ ಪ್ರದೇಶಗಳಲ್ಲಿ ಪೂರಕವಾದ ವಾತಾವರಣವಿಲ್ಲ, ಗ್ರಾಮೀಣ ಭಾಗದಲ್ಲಿ ನೆಟ್ ವರ್ಕ್ ಸಮಸ್ಯೆ ಇರುವುದರಿಂದ ಇದು ಅಸಾಧ್ಯ ಎಂದು ಸಚಿವರು ಹೇಳಿದರು.