Saturday, May 18, 2024
spot_imgspot_img
spot_imgspot_img

ನನಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧ ಕೆಲವು ಷರತ್ತುಗಳಿಗೆ ಒಪ್ಪಬೇಕು; ನಿಲುವು ಸ್ಪಷ್ಟಪಡಿಸಿದ ಕುಮಾರಸ್ವಾಮಿ

- Advertisement -G L Acharya panikkar
- Advertisement -

ರಾಜ್ಯ ವಿಧಾನಸಭಾ ಚುನಾವಣೆಯ ಮತದಾನ ಮುಗಿದಿದ್ದು ಕೆಲವೇ ಗಂಟೆಗಳಲ್ಲಿ ರಾಜಕೀಯ ನಾಯಕರ ಭವಿಷ್ಯ ಹೊರಬೀಳಲಿದೆ. ಮತದಾನ ಮುಗಿಯುತ್ತಿದ್ದಂತೆ ನಾಯಕರು ರಿಲಾಕ್ಸ್ ಮೂಡಿಗೆ ಜಾರಿದ್ದು ಮತ್ತೊಂದೆಡೆ ಬಹುಮತ ಬರದಿದ್ದರೆ ಕಿಂಗ್ ಮೇಕರ್ ಜೆಡಿಎಸ್ ಪಕ್ಷದ ಮೊರೆ ಹೋಗಬೇಕೆಂದು ಬಿಜೆಪಿ, ಕಾಂಗ್ರೆಸ್ ಒಳಗೊಳಗೆ ಕಸರತ್ತು ಶುರು ಮಾಡಿದೆ. ಸದ್ಯ ನನಗೆ ಮೈತ್ರಿ ಮಾಡಿಕೊಳ್ಳುವುದರಲ್ಲಿ ಯಾವುದೇ ಅಸಮಾಧಾನವಿಲ್ಲ. ನಮ್ಮ ಷರತ್ತುಗಳನ್ನು ಯಾವ ಪಕ್ಷ ಪೂರೈಸುತ್ತದೆ ಎಂಬುದರ ಆಧಾರದ ಮೇಲೆ ಬಿಜೆಪಿ ಅಥವಾ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದನ್ನು ನಿರ್ಧರಿಸುತ್ತೇವೆ. ಮೈತ್ರಿಗೆ ನಾವು ಸಿದ್ಧ ಎಂದು ಹೆಚ್​ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಸಿಂಗಾಪುರಕ್ಕೆ ತೆರಳುವ ಮೊದಲು ಹೆಚ್​ಡಿ ಕುಮಾರಸ್ವಾಮಿ ಮಾದ್ಯಮವೊಂದಕ್ಕೆ ಸಂದರ್ಶನ ನೀಡಿದ್ದು, ಈ ಬಾರಿ ನನ್ನ ಷರತ್ತುಗಳನ್ನು ಈಡೇರಿಸಲು ಒಪ್ಪುವ ಪಕ್ಷದೊಂದಿಗೆ ಹೋಗುತ್ತೇನೆ ಜೆಡಿಎಸ್ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಜಾರಿಗೆ ತರಲು ಸಮ್ಮಿಶ್ರ ಪಕ್ಷದ ಪಾಲುದಾರರು ಅವಕಾಶ ನೀಡಬೇಕು ಎಂದು ಹೇಳಿದ್ದಾರೆ. ಸದ್ಯ ನನಗೆ ಮೈತ್ರಿ ಮಾಡಿಕೊಳ್ಳುವುದರಲ್ಲಿ ಯಾವುದೇ ಅಸಮಾಧಾನವಿಲ್ಲ. ನಮ್ಮ ಷರತ್ತುಗಳನ್ನು ಯಾವ ಪಕ್ಷ ಪೂರೈಸುತ್ತದೆ ಎಂಬುದರ ಆಧಾರದ ಮೇಲೆ ಬಿಜೆಪಿ ಅಥವಾ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದನ್ನು ನಿರ್ಧರಿಸುತ್ತೇವೆ. ಮೈತ್ರಿಗೆ ನಾವು ಸಿದ್ಧ ಎಂದು ಹೆಚ್​ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಜೆಡಿಎಸ್ ಪಕ್ಷದ ಸಹಾಯ ಹಸ್ತದತ್ತ ಚಿತ್ತ ನೆಟ್ಟಿದ್ದು ಒಳಗೊಳಗೆ ಕಸರತ್ತು ಶುರುವಾಗಿದೆ. ಇನ್ನು ಮತ ಎಣಿಕೆಯ ದಿನ (ಮೇ 10) ವಿಶ್ರಾಂತಿಗಾಗಿ ಸಿಂಗಾಪುರಕ್ಕೆ ತೆರಳುವ ಮೊದಲು ಹೆಚ್​ಡಿ ಕುಮಾರಸ್ವಾಮಿ ಡೆಕ್ಕನ್ ಹೆರಾಲ್ಡ್ ಪತ್ರಿಕೆಗೆ ಸಂದರ್ಶನ ನೀಡಿದ್ದು, ಕ್ಸಿಟ್ ಪೋಲ್​ಗಳ ಬಗ್ಗೆ ಮಾತನಾಡಿದ್ದಾರೆ. ಹಾಗೂ ಅವುಗಳಲ್ಲಿ ಹಲವು ಸಮೀಕ್ಷೆಗಳು ಜೆಡಿಎಸ್ ಪಾರ್ಟಿಗೆ ಬಹಳ ಕಡಿಮೆ ಸೀಟ್​ಗಳು ಸಿಗುತ್ತವೆ ಎಂದು ತಿಳಿಸಿವೆ. ಆದ್ರೆ ನನಗೆ 50 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಈ ಬಾರಿ ನನ್ನ ಷರತ್ತುಗಳನ್ನು ಈಡೇರಿಸಲು ಒಪ್ಪುವ ಪಕ್ಷದೊಂದಿಗೆ ಹೋಗುತ್ತೇನೆ ಎಂದು ಹೆಚ್​ಡಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ಈ ಮೂಲಕ ಮೈತ್ರಿಗೆ ಸಿದ್ಧ ಎಂಬ ಸಂದೇಶ ರವಾನಿಸಿದ್ದಾರೆ.

ಹೀಗಾಗಿ ಈ ಬಾರಿ ಮೈತ್ರಿಗೆ ಸಹಿ ಹಾಕುವ ಮೊದಲು ಅವರ ಕೆಲವು ಷರತ್ತುಗಳನ್ನು ಪೂರೈಸಲಾಗುತ್ತದೆಯೇ ಎಂದು ಖಚಿತಪಡಿಸಿಕೊಂಡ ನಂತರವೇ ಆ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಳ್ಳುವುದು ಎಂಬ ನಿರ್ಧಾರಕ್ಕೆ ಬಂದಿದ್ದಾರೆ. ಸ್ಥೂಲವಾಗಿ ಹೇಳುವುದಾದರೆ, ಮುಖ್ಯಮಂತ್ರಿಯಾಗಿ ಹೆಚ್​ಡಿ ಕುಮಾರಸ್ವಾಮಿ ಅವರು ಸರ್ಕಾರವನ್ನು ನಡೆಸಲು ಅವರಿಗೆ ಸ್ವತಂತ್ರ ನೀಡಬೇಕು. ಯಾರ ಅಪ್ಪಣೆಯೂ ತೆಗೆದುಕೊಳ್ಳುವಂತಿರಬಾರದು. ಹಾಗೂ ಯಾರು ಹಿಡಿತಸಾಧಿಸಬಾರದು ಎಂಬುವುದು ಕುಮಾರಸ್ವಾಮಿಯವರ ಷರತ್ತು. ನಿರ್ದಿಷ್ಟವಾಗಿ ಹೇಳುವುದಾದರೆ, ಜೆಡಿಎಸ್ ಶಾಸಕರು ಜಲಸಂಪನ್ಮೂಲ, ವಿದ್ಯುತ್ ಮತ್ತು ಸಾರ್ವಜನಿಕ ಕೆಲಸಗಳಂತಹ ಖಾತೆಗಳನ್ನು ಪಡೆಯಬೇಕೆಂದು ಕುಮಾರಸ್ವಾಮಿ ಬಯಸುತ್ತಾರೆ. ಜೆಡಿಎಸ್ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಜಾರಿಗೆ ತರಲು ಸಮ್ಮಿಶ್ರ ಪಕ್ಷದ ಪಾಲುದಾರರು ಅವಕಾಶ ನೀಡಬೇಕು ಎಂದು ಹೆಚ್​ಡಿ ಕುಮಾರಸ್ವಾಮಿ ತಮ್ಮ ಷರತ್ತುಗಳ ಬಗ್ಗೆ ವಿವರಿಸಿದ್ದಾರೆ.

- Advertisement -

Related news

error: Content is protected !!